ಬಿ.ವಿ.ಶ್ರೀನಿವಾಸ್‌ ಜನ್ಮದಿನ, ಹುಲಿಗಳನ್ನು ದತ್ತು ಪಡೆದ ಕಾಂಗ್ರೆಸ್‌ ಯುವ ನಾಯಕರು

ಶಿವಮೊಗ್ಗ: ರಾಷ್ಟ್ರೀಯ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರ ಜನ್ಮದಿನದ ಅಂಗವಾಗಿ ನಗರದ ಸಮೀಪದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿರುವ ಪೂರ್ಣಿಮಾ ಹಾಗೂ ವಿಕ್ರಂ ಎಂಬ ಹೆಸರಿನ ಎರಡು ಹುಲಿಗಳನ್ನು ಕಾಂಗ್ರೆಸ್‌ ಮುಖಂಡರು ದತ್ತು ಪಡೆದಿದ್ದಾರೆ. (ಈ ಸುದ್ದಿಯನ್ನು ಇನ್ನು 38 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಜಿ. ಮಧುಸೂದನ್ ಹಾಗೂ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಗರಾಧ್ಯಕ್ಷ ಚರಣ್ ಶೆಟ್ಟಿ ನೇತೃತ್ವದಲ್ಲಿ ಹುಲಿಗಳನ್ನು ದತ್ತು ಪಡೆಯಲಾಯಿತು.

Congress-leaders-adopt-two-tigers

ಆಡಂಬರದ ಹುಟ್ಟುಹಬ್ಬದ ಆಚರಣೆಗಳನ್ನು ಬದಿಗಿಟ್ಟು ವನ್ಯಜೀವಿ ಸಂರಕ್ಷಣೆಗೆ ಕೊಡುಗೆ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪರಿಸರ ಹಾಗೂ ವನ್ಯಜೀವಿಗಳ ರಕ್ಷಣೆ ಇಂದಿನ ಅಗತ್ಯ. ಸಮಾಜಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಹುಲಿಗಳನ್ನು ದತ್ತು ಪಡೆಯಲಾಗಿದೆ ಎಂದು ನಾಯಕರು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಸಂಘಟನೆಯ ವಿವಿಧ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.