ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 13 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. ಸಾಯಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 31 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಐಟಿಐ ಹಾಗೂ ಯಾವುದೇ ವಿಷಯದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರುವ 18 ರಿಂದ 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಭಾಗವಹಿಸಲು ಅರ್ಹರಾಗಿದ್ದಾರೆ. ಆಸಕ್ತರು ರಿಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್ನಲ್ಲಿರುವ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9380663606, 9108235132 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿತ ತಿಳಿಸಿದ್ದಾರೆ.