ಶಿವಮೊಗ್ಗ ಕೋರ್ಟ್‌ನಿಂದ ಸೈಕಲ್‌ ಜಾಥಾ, ಕಾರಣವೇನು?

ಶಿವಮೊಗ್ಗ: ಸಾರ್ವಜನಿಕರಲ್ಲಿ ಕಾನೂನು ಅರಿವು ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಶಿವಮೊಗ್ಗ ನಗರದಲ್ಲಿ ಸೋಮವಾರ ಸೈಕಲ್ ಜಾಥಾ ನಡೆಸಲಾಯಿತು. (ಈ ಸುದ್ದಿಯನ್ನು ಇನ್ನು 53 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಸಂತೋಷ್ ಎಂ.ಎಸ್., ಸಾರ್ವಜನಿಕರು ಉಚಿತ ಕಾನೂನು ನೆರವು ಹಾಗೂ ಲೋಕ್ ಅದಾಲತ್‌ಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಉಚಿತ ಸಹಾಯವಾಣಿ ಸಂಖ್ಯೆ 15100 ಸಂಪರ್ಕಿಸುವಂತೆ ತಿಳಿಸಿದರು.

Cycle-Jaatha-from-Shivamogga-Court

ನವೆಂಬರ್ 21 ರಂದು ಚೆಕ್ ಅಮಾನ್ಯ ಪ್ರಕರಣಗಳ ವಿಶೇಷ ಲೋಕ್ ಅದಾಲತ್ ಹಾಗೂ ಡಿಸೆಂಬರ್ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ನವೆಂಬರ್ 21 ರಿಂದ ಡಿಸೆಂಬರ್ 11 ರವರೆಗೆ ಸಂಚಾರಿ ಇ-ಚಲನ್ ಬಾಕಿ ದಂಡ ಪಾವತಿಗೆ ಸರ್ಕಾರ ಶೇ.50 ರಷ್ಟು ರಿಯಾಯಿತಿ ಘೋಷಿಸಿದೆ ಎಂದು ಅವರು ಮಾಹಿತಿ ನೀಡಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್. ರಾಘವೇಂದ್ರ ಸ್ವಾಮಿ ಮಾತನಾಡಿ, ಸಾರ್ವಜನಿಕರು ಲೋಕ್ ಅದಾಲತ್ ಮೂಲಕ ಶೀಘ್ರ ಹಾಗೂ ನ್ಯಾಯಯುತ ಪರಿಹಾರ ಕಂಡುಕೊಳ್ಳಬೇಕು ಎಂದರು.

ಜಿಲ್ಲಾ ನ್ಯಾಯಾಲಯದ ಆವರಣದಿಂದ ಹೊರಟ ಸೈಕಲ್ ಜಾಥಾವು ನಗರದ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಸಂಚರಿಸಿ ಮರಳಿ ನ್ಯಾಯಾಲಯದ ಆವರಣ ತಲುಪಿತು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.