ಶಿವಮೊಗ್ಗ ಲೈವ್
ಶಿವಮೊಗ್ಗ: ಅಂಗಡಿಯೊಂದರಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ದಿನಸಿ, ಪೀಠೋಪಕರಣ ಸಟ್ಟು ಹೋಗಿವೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಸಾರ್ವಕರ್ ನಗರದ ಕುಚಲಕ್ಕಿ ಕೇರಿಯ ಶ್ರೀ ಪ್ರಾವಿಷನ್ ಸ್ಟೋರ್ ಮಳಿಗೆಯಲ್ಲಿ ಘಟನೆ ಸಂಭವಿಸಿದೆ. ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಹೋಗಿವೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್ನಿಂದ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.
