ದುಷ್ಕರ್ಮಿಗಳಿಂದ ಸರ್ಕಾರಿ ಶಾಲೆಗೆ ಬೆಂಕಿ, ಸ್ಥಳೀಯರ ಆಕ್ರೋಶ, ಟೈರ್‌ ಸುಟ್ಟು ಹೆದ್ದಾರಿ ತಡೆ

ಸಾಗರ: ತಾಲ್ಲೂಕಿನ ತುಮರಿಯ ಕೆರೆಕೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸುತ್ತಿದ್ದಾರೆ. (ಈ ಸುದ್ದಿಯನ್ನು ಇನ್ನು 49 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಕೆರೆಕೈ ಸರ್ಕಾರ ಶಾಲೆಯಲ್ಲಿ ಅಡುಗೆ ಕೋಣೆಯ ಬಾಗಿಲಿಗೆ ಬೆಂಕಿ ಹಚ್ಚಲಾಗಿದೆ. ಒಳಗಿದ್ದ ಸಿಲಿಂಡರ್‌ ಸ್ಪೋಟಿಸಲು ದುಷ್ಕರ್ಮಿಗಳು ಪ್ರಯತ್ನಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸರ್ಕಾರಿ ಶಾಲೆಯ ಪೈಪ್‌ಗಳು, ಗೇಟ್‌, ಪಕ್ಕದ ಟ್ಯಾಂ‍ಕ್‌ನ ಪೈಪ್‌, ನೀರಿನ ಟ್ಯಾಂಕ್‌ಗೆ ಬೆಂಕಿ ಹಚ್ಚಲಾಗಿದೆ. ಕಳೆದ ರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದ್ದು, ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಇದೇ ಶಾಲೆಯಲ್ಲಿ ಈ ಹಿಂದೆಯು ದುಷ್ಕರ್ಮಿಗಳು ದಾಳಿ ಮಾಡಿ ಹಾನಿಗೊಳಿಸಿದ್ದಾರೆ.  

Miscreants-set-fire-to-Kerekai-Government-School

ಟೈರ್‌ಗೆ ಬಂಕಿ ಹಚ್ಚಿ ಆಕ್ರೋಶ

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮರಿ ಭಾಗದಲ್ಲಿ ಪದೇ ಪದೆ ಇಂತಹ ದುಷ್ಕೃತ್ಯ ನಡೆದರು ಆರೋಪಿಗಳನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ರಾಷ್ಟ್ರೀಯ ಹೆದ್ದಾರಿಯಲ್ಲಿ 369ರಲ್ಲಿ ವಾಹನ ತಡೆದು ನಡು ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಅವರು ಸ್ಥಳಕ್ಕೆ ಬರಬೇಕು ಎಂದು ಈ ಭಾಗದ ಜನರು ಆಗ್ರಹಿಸಿದ್ದಾರೆ. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.