ಮೆಗ್ಗಾನ್‌ ‍ಆಸ್ಪತ್ರೆ ಒಳಗೆ ಸೆಕ್ಯೂರಿಟಿ ಗಾರ್ಡ್‌ ಮೇಲೆ ನಾಲ್ಕೈದು ಮಂದಿಯಿಂದ ದಾಳಿ, ಹಲ್ಲೆ, ಯಾಕೆ?

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಬಳಿ ಕರ್ತವ್ಯದಲ್ಲಿದ್ದ ಸೆಕ್ಯುರಿಟಿ ಗಾರ್ಡ್ ಮೇಲೆ ನಾಲ್ಕೈದು ಮಂದಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ. ವಿನಯ್ (28) ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿ. (ಈ ಸುದ್ದಿಯನ್ನು ಇನ್ನು 41 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಅಪಘಾತಕ್ಕೊಳಗಾಗಿದ್ದ ರೋಗಿಯೊಬ್ಬರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ರೋಗಿಯ ಜೊತೆಗಿದ್ದ ಮೂವರನ್ನು ಒಳಗೆ ಬಿಡಲಾಗಿತ್ತು. ಬಳಿಕ ಬಂದ ಮತ್ತೆ ಮೂವರು ಒಳಗೆ ಹೋಗಲು ಯತ್ನಿಸಿದ್ದಾರೆ. ರೋಗಿಗೆ ತೊಂದರೆಯಾಗುತ್ತದೆ ಎಂದು ಸೆಕ್ಯುರಿಟಿ ಗಾರ್ಡ್ ತಡೆದಾಗ, ಅವರೊಂದಿಗೆ ಗಲಾಟೆ ಮಾಡಿ ಒಳನುಗ್ಗಿದ್ದಾರೆ ಎಂದು ಆರೋಪಿಸಲಾಗಿದೆ. ಒಳಗೆ ಹೋದವರನ್ನು ಹೊರಗೆ ಕಳುಹಿಸಲು ಯತ್ನಿಸಿದಾಗ 4 ರಿಂದ 5 ಜನರು ಏಕಾಏಕಿ ಸೆಕ್ಯೂರಿಟಿ ವಿನಯ್ ಅವರ ಕುತ್ತಿಗೆ ಹಾಗೂ ಬೆನ್ನಿನ ಭಾಗಕ್ಕೆ ಗುದ್ದಿ, ನೆಲಕ್ಕೆ ತಳ್ಳಿ ಒದ್ದಿದ್ದಾರೆ.‌ ಅಲ್ಲದೆ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

160125-mc-gann-hospital-general-image.webp

ಘಟನೆ ವೇಳೆ ವಿನಯ್ ಅವರ 2 ಗ್ರಾಂ ತೂಕದ ಚಿನ್ನದ ಕಿವಿಯ ಓಲೆ ಕಳೆದುಹೋಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.