ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಲ್ಲಿನ ಶೈಕ್ಷಣಿಕ ಪ್ರತಿಭೆ ಗುರುತಿಸಿ, ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ವತಿಯಿಂದ ನ.15ರಂದು ಶಿವಮೊಗ್ಗದಲ್ಲಿ ಪ್ರತಿಭಾ ಪರೀಕ್ಷೆ ಆಯೋಜಿಸಲಾಗಿದೆ. (ಈ ಸುದ್ದಿಯನ್ನು ಇನ್ನು 48 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ನಗರದ ಗೋಪಾಳದ ಚಾಲುಕ್ಯನಗರದ ಕೆ.ಎಚ್.ಬಿ. ಕಾಲನಿಯ ಸನ್‌ಸಿಟಿ ವಿದ್ಯಾಲಯದಲ್ಲಿ ನವೆಂಬರ್ 15ರಂದು ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10.30ರಿಂದ 11.30ರವರೆಗೆ ಹಾಗೂ ಮಧ್ಯಾಹ್ನ 2ರಿಂದ 3ರವರೆಗೆ ಎರಡು ಅವಧಿಗಳಲ್ಲಿ ಪರೀಕ್ಷೆ ನಡೆಯಲಿದೆ.

ವಿದ್ಯಾರ್ಥಿ ವೇತನ, ಲ್ಯಾಪ್‌ಟಾಪ್, ಟ್ಯಾಬ್
ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರುವ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನಕ್ಕೆ ಪರಿಗಣಿಸಲಾಗುವುದು. ಅರ್ಹ ಸಾಧಕರಿಗೆ ಲ್ಯಾಪ್‌ಟಾಪ್, ಟ್ಯಾಬ್ ಉಡುಗೊರೆ ಹಾಗೂ ಉಚಿತ ಶಿಕ್ಷಣದ ಅವಕಾಶ ಕಲ್ಪಿಸಲಾಗುವುದು. ಪರೀಕ್ಷೆಗೆ ನೋಂದಣಿ ಉಚಿತವಾಗಿದೆ. ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಭಾಗವಹಿಸಬಹುದು.
ವಿದ್ವತ್ ಪಿಯು ಕಾಲೇಜು ಮೊದಲ ಬ್ಯಾಚ್‌ನಲ್ಲಿಯೇ ಕೆಸಿಇಟಿ ಎಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಗಳಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಏಮ್ಸ್‌ಗೆ ಪ್ರವೇಶ ಪಡೆದಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ನಂಬರ್‌ಗಳಾದ 7338135009, 7338138007 ಸಂಪರ್ಕಿಸಬಹುದು. www.vidvath.org/talent-test ಮೂಲಕ ಆನ್‌ಲೈನ್ ನೋಂದಣಿಗೂ ಅವಕಾಶವಿದೆ ಎಂದು ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಹಾಗೂ ಕಾರ್ಯದರ್ಶಿ ಪ್ರಜ್ವಲ್ ರೈ ತಿಳಿಸಿದ್ದಾರೆ.