ಶಿವಮೊಗ್ಗ ಲೈವ್
ಶಿವಮೊಗ್ಗ: ಅಪ್ರಾಪ್ತ ವಯಸ್ಕನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದ ವಾಹನ ಮಾಲೀಕನಿಗೆ ನ್ಯಾಯಾಲಯ ₹25,000 ದಂಡ ವಿಧಿಸಿದೆ. (ಈ ಸುದ್ದಿಯನ್ನು ಇನ್ನು 28 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಪೂರ್ವ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ನಾಗರಾಜ್ ಹೆಚ್.ಎನ್. ಹಾಗೂ ಸಿಬ್ಬಂದಿ ನವೆಂಬರ್ 6 ರಂದು ಕುವೆಂಪು ನಗರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಅಪ್ರಾಪ್ತ ಬಾಲಕ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ಚಲಾಯಿಸುತ್ತಿರುವುದು ಕಂಡುಬಂದಿತ್ತು. ಅಪ್ರಾಪ್ತನಿಗೆ ವಾಹನ ಚಾಲನೆ ಮಾಡಲು ನೀಡಿದ್ದ ಹಿನ್ನೆಲೆ ಬೈಕ್ ಮಾಲೀಕನ ವಿರುದ್ಧ ಮೋಟಾರು ವಾಹನ ಕಾಯ್ದೆ ಅಡಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ವಾಹನದ ಮಾಲೀಕನಿಗೆ ₹25,000 ದಂಡ ವಿಧಿಸಿ ಆದೇಶಿಸಿದೆ.
