ಶಿವಮೊಗ್ಗ ಲೈವ್
ಶಿವಮೊಗ್ಗ: ಮನೆಯ ಮುಂದೆ ನಿಲ್ಲಿಸಿದ್ದ ₹3.68 ಲಕ್ಷ ಮೌಲ್ಯದ ರಾಯಲ್ ಎನ್‌ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಬೈಕ್ ಕಳ್ಳತನವಾಗಿದೆ. ಕುವೆಂಪು ನಗರದ ಮಧುವನ ಕಾಲೋನಿಯಲ್ಲಿ ಘಟನೆ ನಡೆದಿದೆ. (ಈ ಸುದ್ದಿಯನ್ನು ಇನ್ನು 27 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಅನೂಪ್ ಶ್ರೀರಾಮ್ ಅವರು ಊರಿಗೆ ತೆರಳಿದ್ದ ಹಿನ್ನಲೆ, ಸರ್ವೀಸ್‌ಗೆ ನೀಡಿದ್ದ ಬೈಕ್ ಅನ್ನು ತಂದು ತಮ್ಮ ಮನೆಯಲ್ಲಿ ನಿಲ್ಲಿಸಿಕೊಳ್ಳುವಂತೆ ಸ್ನೇಹಿತ ನಂದನ್ ಎಂಬುವರಿಗೆ ತಿಳಿಸಿದ್ದರು. ಅದರಂತೆ ನಂದನ್ ಬೈಕ್ ತಂದು ಮಧುವನ ಕಾಲೋನಿಯಲ್ಲಿರುವ ತಮ್ಮ ಮನೆಯ ಮುಂದೆ ನಿಲ್ಲಿಸಿದ್ದರು. ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಬೆಳಿಗ್ಗೆ ನಾಪತ್ತೆಯಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
