ಶಿವಮೊಗ್ಗ ಲೈವ್
ಶಿವಮೊಗ್ಗ: ತಾಲ್ಲೂಕಿನ ಗೆಜ್ಜೇನಹಳ್ಳಿ ಗ್ರಾಮದ ರಾಮಕೃಷ್ಣ ಆಶ್ರಮದ ಆರ್ಚ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರ ತೀವ್ರ ಗಾಯಗೊಂಡಿರುವ ಘಟನೆ ನಡೆದಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಭೈರನಕೊಪ್ಪ ಗ್ರಾಮದ ಬೋವಿ ಕಾಲೋನಿ ನಿವಾಸಿ ಮುರುಗೇಶ್ (45) ಗಾಯಾಳು. ಮುರುಗೇಶ್ ಅವರು ತಮ್ಮ ಹೊಂಡಾ ಶೈನ್ ಬೈಕ್‌ನಲ್ಲಿ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಸ್ವಿಫ್ಟ್ ಡಿಸೈರ್ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಾಯಗೊಂಡಿದ್ದ ಮುರುಗೇಶ್ ಅವರನ್ನು ಸ್ಥಳೀಯರು ಆಟೋದಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಪರೀಕ್ಷಿಸಿದ ವೈದ್ಯರು ಬಲಗಾಲಿನ ಮೂಳೆ ಮುರಿದಿದೆ ಎಂದು ತಿಳಿಸಿದ್ದಾರೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.