ಶಿವಮೊಗ್ಗ ಲೈವ್
ಶಿವಮೊಗ್ಗ: ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿದೆ. ಆಯನೂರು ಸಮೀಪದ ಸುಡೂರು ಗ್ರಾಮದ 5 ನೇ ಮೈಲಿಗಲ್ಲು ಬಳಿ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಅಡ್ಡೇರಿ ಗ್ರಾಮದ ರೈತ ದಿನೇಶ್ ಎಂಬುವವರ ಬೈಕ್ ಕಳುವಾಗಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ದಿನೇಶ್ ಅವರು ತಮ್ಮ ಹೀರೊ ಎಚ್ಎಫ್ ಬೈಕ್ ಅನ್ನು ಸೂಡೂರು ಗ್ರಾಮದ 5 ನೇ ಮೈಲಿಗಲ್ಲಿನ ಬಸ್ ನಿಲ್ದಾಣದ ಬಳಿ ನಿಲ್ಲಿಸಿ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ತೆರಳಿದ್ದರು. ಸಂಜೆ ವಾಪಸ್ ಬಂದು ನೋಡಿದಾಗ ಬೈಕ್ ಕಾಣೆಯಾಗಿತ್ತು. ಎಲ್ಲಾ ಕಡೆ ಹುಡುಕಾಟ ನಡೆಸಿದ ಬಳಿಕ ಕುಂಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
