ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ: ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ನವೆಂಬರ್ 20 ರಿಂದ ಡಿಸೆಂಬರ್ 19 ರವರೆಗೆ ತರಬೇತಿ ನಡೆಯಲಿದೆ. ತರಬೇತಿಯಲ್ಲಿ ವಿವಿಧ ಮಾದರಿಯ ಬಿಸ್ಕತ್ತುಗಳು, ಕೇಕ್, ಬ್ರೆಡ್, ಬನ್, ರಸ್ಕ್, ಪಿಜ್ಜಾ ಹಾಗೂ ಪಫ್ಸ್ ಸೇರಿದಂತೆ ಹಲವು ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.

Agriculture-University-Iruvakki-sagara-campus-board

ತರಬೇತಿ ಶುಲ್ಕ ₹4,500 ನಿಗದಿಪಡಿಸಲಾಗಿದ್ದು, ಊಟ ಹಾಗೂ ವಸತಿ ಸೌಲಭ್ಯ ಇರುವುದಿಲ್ಲ. ಆಸಕ್ತರು ನವೆಂಬರ್ 19 ರೊಳಗಾಗಿ ಶುಲ್ಕ ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. (9449187763) ಅಥವಾ ಜಯಶಂಕರ್ (9686555897) ಅವರನ್ನು ಸಂಪರ್ಕಿಸಬಹುದು ಎಂದು ನವುಲೆ ಕೃಷಿ ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.