ಶಿವಮೊಗ್ಗದಲ್ಲಿ ಕೆಪಿಎಸ್‌ಸಿ ಪರೀಕ್ಷೆ ಆರಂಭ, ಹೇಗಿತ್ತು ಭದ್ರತೆ?

ಶಿವಮೊಗ್ಗ: ಕೆಪಿಎಸ್‌ಸಿ ನಡೆಸುವ 2026–27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯು ನಗರದ 24 ಕೇಂದ್ರಗಳಲ್ಲಿ ಶನಿವಾರ ಬೆಳಿಗ್ಗೆ 10 ಗಂಟೆಗೆ ಆರಂಭಗೊಂಡಿದೆ. ಜಿಲ್ಲೆಯಾದ್ಯಂತ ಒಟ್ಟು 8,466 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. (ಈ ಸುದ್ದಿಯನ್ನು ಇನ್ನು 46 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ಮೊದಲ ಅವಧಿಯ ಸಾಮಾನ್ಯ ಅಧ್ಯಯನ ಪತ್ರಿಕೆ-1 ರ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಎರಡನೇ ಅವಧಿಯ ಪತ್ರಿಕೆ-2 ಪರೀಕ್ಷೆ ಜರುಗಲಿದೆ.

KPSC-Gazetted-Probationers-prelims-Exam-in-Shivamogga

ಕಟ್ಟುನಿಟ್ಟು ತಪಾಸಣೆ

ಪರೀಕ್ಷಾ ಕೇಂದ್ರಗಳ ಒಳಗೆ ಪ್ರವೇಶಿಸುವ ಮುನ್ನ ಅಭ್ಯರ್ಥಿಗಳನ್ನು ಬಿಗಿ ತಪಾಸಣೆಗೆ ಒಳಪಡಿಸಿ ಕಳುಹಿಸಲಾಯಿತು. ಬೆಳಿಗ್ಗೆ 9 ಗಂಟೆಯಿಂದಲೇ ಅಭ್ಯರ್ಥಿಗಳು ಹಾಲ್ ಟಿಕೆಟ್ ಹಾಗೂ ಗುರುತಿನ ಚೀಟಿಯೊಂದಿಗೆ ಕೇಂದ್ರಗಳತ್ತ ಆಗಮಿಸುತ್ತಿದ್ದ ದೃಶ್ಯ ಕಂಡುಬಂತು.

ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ಪ್ರತಿ ಕೇಂದ್ರಕ್ಕೂ ವಿಶೇಷ ಜಾಗೃತ ದಳ ಹಾಗೂ ಸಿಸಿಟಿವಿ ಕಣ್ಗಾವಲು ವಹಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇನ್ನು, ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ. ನಿಟಳಿ, ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ್‌ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.