ಶಿವಮೊಗ್ಗ ಲೈವ್
ಶಿವಮೊಗ್ಗ: ಮತ್ತೂರು ಚಾನಲ್ ಸಮೀಪ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದಿದ್ದು, ಕಾರ್ಮಿಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತೂರು ಗ್ರಾಮದ ನಾಗೇಶ (26) ತೀವ್ರ ಗಾಯಗೊಂಡಿದ್ದಾರೆ. (ಈ ಸುದ್ದಿಯನ್ನು ಇನ್ನು 31 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ನಾಗೇಶ ಅವರು ಕೆಲಸಕ್ಕೆ ಸಿದ್ಧರಹಳ್ಳಿಗೆ ತಮ್ಮ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಡೆಕಲ್ ಕಡೆಯಿಂದ ಶಿವಮೊಗ್ಗ ಕಡೆಗೆ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಗೇಶ ಅವರ ತೊಡೆ ಹಾಗೂ ಪಾದದ ಮೂಳೆ ಮುರಿದಿದ್ದು, ತಲೆಗೆ ತೀವ್ರ ಪೆಟ್ಟು ಬಿದ್ದು ಗಾಯವಾಗಿದೆ ಎಂದು ಆರೋಪಿಸಲಾಗಿದೆ.

ಸ್ಥಳೀಯರು ನಾಗೇಶ್ ಅವರನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ಹಾಗೂ ಶಿವಮೊಗ್ಗದ ಅಮೃತ್ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.