ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ಬೊಮ್ಮನಕಟ್ಟೆ ಮುಖ್ಯ ರಸ್ತೆಯ ಕೆನರಾ ಬ್ಯಾಂಕ್ ಬಳಿ ಆಟೋರಿಕ್ಷಾ ಡಿಕ್ಕಿಯಾಗಿ ಸ್ಕೂಟರ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೊಮ್ಮನಕಟ್ಟೆಯ ಬಂಗಾರಪ್ಪ ಬಡಾವಣೆ ನಿವಾಸಿ, ವೀರಭದ್ರೇಶ್ವರ ಟಾಕೀಸ್ ಮ್ಯಾನೇಜರ್ ಅನಂತಪದ್ಮನಾಭ (60) ಗಾಯಗೊಂಡವರು. (ಈ ಸುದ್ದಿಯನ್ನು ಇನ್ನು 28 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶುಕ್ರವಾರ ಬೆಳಿಗ್ಗೆ ಅನಂತಪದ್ಮನಾಭ ಅವರು ತಮ್ಮ ಆಕ್ಟಿವಾ ಸ್ಕೂಟರ್ನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಬೊಮ್ಮನಕಟ್ಟೆ ರೈಲ್ವೆ ಗೇಟ್ ಕಡೆಯಿಂದ ಬಂದ ಆಟೋರಿಕ್ಷಾ ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಅನಂದ ಪದ್ಮನಾಭಾ ಅವರ ಎಡ ಭುಜ, ಮುಖ ಹಾಗೂ ಮೊಣಕಾಲಿಗೆ ಗಾಯಗಳಾಗಿವೆ.

ಗಾಯಾಳುವನ್ನು ಕೂಡಲೆ ಅಶೋಕ ಸಂಜೀವಿನಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.