ಬಸ್‌ ನಿಲ್ದಾಣದಲ್ಲೇ ವಿಷ ಸೇವಿಸಿ ವ್ಯಕ್ತಿ ಸಾವು, ಆಗಿದ್ದೇನು?

ಶಿರಾಳಕೊಪ್ಪ: ಜಮೀನು ವಿವಾದ ಹಿನ್ನೆಲೆ ಮನನೊಂದ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಘಟನೆ ತಾಲ್ಲೂಕಿನ ಇನಾಂ ಅಗ್ರಹಾರ ಮುಚಡಿ ಗ್ರಾಮದ ಬಸ್‌ ನಿಲ್ದಾಣದಲ್ಲಿ ಘಟನೆ ನಡೆದಿದೆ. (ಈ ಸುದ್ದಿಯನ್ನು ಇನ್ನು 37 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಗ್ರಾಮದ ಶಿವಾನಂದಪ್ಪ ಬಾಳೇರ (60) ಆತ್ಮಹತ್ಯೆ ಮಾಡಿಕೊಂಡವರು. ಇನಾಂ ಅಗ್ರಹಾರ ಮುಚಡಿ ಗ್ರಾಮದ 1 ಎಕರೆ ಜಮೀನಿನ ವಿಷಯವಾಗಿ ವಿವಾದವಿತ್ತು. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣವಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದರಿಂದ ಶಿವಾನಂದಪ್ಪ ಅವರು ಮನನೊಂದಿದ್ದರು ಎಂದು ಹೇಳಲಾಗಿದೆ.

crime name image

ನವೆಂಬರ್ 13 ರಂದು ಸಂಜೆ ಮನೆಯಿಂದ ಹೊರಗೆ ಹೋಗಿದ್ದ ಶಿವಾನಂದಪ್ಪ, ತಮ್ಮ ಊರಿನ ಬಸ್ ನಿಲ್ದಾಣದಲ್ಲಿ ವಿಷ ಸೇವಿಸಿ ಬಿದ್ದಿದ್ದರು. ತಕ್ಷಣ ಅವರನ್ನು 108 ಆಂಬುಲೆನ್ಸ್ ಮೂಲಕ ಶಿರಾಳಕೊಪ್ಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಿವಾನಂದಪ್ಪ ಅವರ ಪತ್ನಿ ನೀಡಿರುವ ದೂರಿನ ಆಧಾರದಲ್ಲಿ ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.