ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ಶಾಹಿ ಎಕ್ಸ್‌ಪೋರ್ಟ್ಸ್ ಸಂಸ್ಥೆಯ ನೌಕರರು ಹಾಗೂ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಇ–ಮೇಲ್ ಖಾತೆಗಳನ್ನು ಸೃಷ್ಟಿಸಿ ಸಂಸ್ಥೆಯ ಮೇಲಾಧಿಕಾರಿಗಳಿಗೆ ಸುಳ್ಳು ಆರೋಪಗಳ ದೂರು ರವಾನಿಸಿರುವ ಘಟನೆ ಬೆಳಕಿಗೆ ಬಂದಿದೆ. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
2025ರ ಜೂನ್‌ನಿಂದ 2026ರ ಸೆಪ್ಟೆಂಬರ್ ಮಧ್ಯೆ ಘಟನೆ ನಡೆದಿದೆ. ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಲವು ಸಿಬ್ಬಂದಿಯ ಹೆಸರಿನಲ್ಲಿ ದುಷ್ಕರ್ಮಿಗಳು ನಕಲಿ ಇ–ಮೇಲ್ ಐಡಿಗಳನ್ನು ಸೃಷ್ಟಿಸಿದ್ದಾರೆ. ಆ ಖಾತೆಗಳ ಮೂಲಕ ಕಂಪನಿಯ ಮೇಲಾಧಿಕಾರಿಗಳಿಗೆ ಇ–ಮೇಲ್ ಕಳುಹಿಸಿ, ನೌಕರರ ವಿರುದ್ಧ ಸುಳ್ಳು ದೂರುಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ವಿಷಯ ತಿಳಿದು ಸಂಸ್ಥೆಯ ಆಡಳಿತ ಮಂಡಳಿಯು ಸಂಬಂಧಪಟ್ಟ ಸಿಬ್ಬಂದಿಯನ್ನು ವಿಚಾರಿಸಿದಾಗ, ತಮಗೂ ಆ ಇ–ಮೇಲ್ ಖಾತೆಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.