ಶಿವಮೊಗ್ಗ ಲೈವ್
ಸಾಗರ: ಸಾಗರ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ (officer) ಜಿ.ಹೆಚ್. ಸತ್ಯನಾರಾಯಣ ಅಧಿಕಾರ ವಹಿಸಿಕೊಂಡರು. ರಾಜ್ಯ ಸರ್ಕಾರದ ವರ್ಗಾವಣೆ ಆದೇಶದಂತೆ, ಹಿಂದೆ ಉಪವಿಭಾಗಾಧಿಕಾರಿಯಾಗಿದ್ದ ವೀರೇಶ್ ಕುಮಾರ್ ಅವರ ಸ್ಥಾನಕ್ಕೆ ಸತ್ಯನಾರಾಯಣ ಅವರನ್ನು ನೇಮಕ ಮಾಡಲಾಗಿದೆ. ಸತ್ಯನಾರಾಯಣ ಅವರು ಈ ಹಿಂದೆ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. (ಈ ಸುದ್ದಿಯನ್ನು ಇನ್ನು 15 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
