ಶಿವಮೊಗ್ಗದಲ್ಲಿ ಟೀಮ್‌ ಇಂಡಿಯಾ ಮಾಜಿ ನಾಯಕನಿಂದ ಪೊಲೀಸ್‌ ಕ್ರೀಡಾಕೂಟಕ್ಕೆ ಚಾಲನೆ

ಶಿವಮೊಗ್ಗ: ಕ್ರೀಡಾಪಟುಗಳು ಯಾವುದೇ ಕಾರಣಕ್ಕೂ ನಂಬಿಕೆ ಹಾಗೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು. ಸದಾ ಪ್ರಥಮ ಸ್ಥಾನ ಗಳಿಸಲು ಶ್ರಮಿಸಬೇಕು ಎಂದು ಭಾರತೀಯ ಅಂಧರ ಕ್ರಿಕೆಟ್ (Cricket) ತಂಡದ ಮಾಜಿ ನಾಯಕ, ಪದ್ಮಶ್ರೀ ಪುರಸ್ಕೃತ ಶೇಖರ್ ಎಲ್ ಸಲಹೆ ನೀಡಿದರು. (ಈ ಸುದ್ದಿಯನ್ನು ಇನ್ನು 52 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 2026ನೇ ಸಾಲಿನ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

former-Indian-Blind-Cricket-team-captain-Shekhar-L.-inaugurates-Shivamogga-District-Police-sports

ನಾವು ಭಾರತೀಯರು, ನಮಗೆ ಅಸಾಧ್ಯವಾದುದ್ದು ಯಾವುದೂ ಇಲ್ಲ. ಯಾವುದೇ ಕ್ರೀಡೆಯಲ್ಲಿ ಭಾಗವಹಿಸಿದರೂ ಮೊದಲ ಸ್ಥಾನ ಪಡೆಯಲು ಸದಾ ಪ್ರಯತ್ನಪಡಬೇಕು. ನಿರಂತರವಾಗಿ ಶ್ರಮಿಸಿದಾಗ ಮಾತ್ರ ಯಶಸ್ಸು ಸಿಗಲು ಸಾಧ್ಯ ಎಂದು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ತಮ್ಮ ಹಳೆಯ ದಿನಗಳನ್ನು ಮೆಲಕು ಹಾಕಿದ ಅವರು, ‘1997 ರಿಂದ 2005–06 ರವರೆಗೆ ನಾನು ಶಿವಮೊಗ್ಗ ತಂಡದ ಪರವಾಗಿ ಕ್ರಿಕೆಟ್ ಆಡುತ್ತಿದ್ದೆ. ಬೆಂಗಳೂರು, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಗೆ ಆಡಲು ಹೋದರೂ ಎದುರಾಳಿ ತಂಡದವರು ಶೇಖರ್ ನಾಯಕ್ ಬಂದಿದ್ದಾನಾ ಎಂದು ವಿಚಾರಿಸುತ್ತಿದ್ದರು. ಆ ಮಟ್ಟಿನ ಪ್ರಭಾವ ನಮ್ಮ ತಂಡಕ್ಕಿತ್ತು’ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.