ಸಂತೆ ಕಡೂರು ಬಳಿ ಪೆಟ್ರೋಲ್‌ ಬಂಕ್‌ನ ಶೆಡ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಶಿವಮೊಗ್ಗ: ಪೆಟ್ರೋಲ್ ಬಂಕ್‌ನ ಶೆಡ್‌ನಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿ ತಾಲ್ಲೂಕಿನ ಸೋಮಿನಕೊಪ್ಪ ಗ್ರಾಮದ ಶಂಕರ್ ನಾಯ್ಕ್ (22) ಮೃತ ಯುವಕ. (ಈ ಸುದ್ದಿಯನ್ನು ಇನ್ನು 25 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಸಂತೇಕಡೂರು ಸಮೀಪದ ಮಹಾಲಕ್ಷ್ಮಿ ಪೆಟ್ರೋಲ್ ಬಂಕ್‌ನಲ್ಲಿ ಶಂಕರ ನಾಯ್ಕ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ ಎಂದಿನಂತೆ ಕೆಲಸಕ್ಕೆ ಬಂದಿದ್ದ ಆತ, ಪೆಟ್ರೋಲ್ ಬಂಕ್ ಪಕ್ಕದಲ್ಲಿದ್ದ ಸಾಮಗ್ರಿಗಳನ್ನು ಇರಿಸುವ ಶೆಡ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

Petrol-Bunk-Near-Sante-Kadur-in-Shivamogga

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.