ಪಡಿತರ ವಿತರಣೆ, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ ರೇಷನ್‌ ಕಾರ್ಡ್‌ದಾರರಿಗೆ ಮಹತ್ವದ ಸೂಚನೆ

ಶಿವಮೊಗ್ಗ: ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಾಗೂ ಫಲಾನುಭವಿಗಳ ಮಾಹಿತಿಯನ್ನು ನವೀಕರಿಸಲು ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ನವೆಂಬರ್ 30ರ ಒಳಗೆ  ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 56 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇ-ಕೆವೈಸಿ ಮಾಡಿಸಿ ಐದು ವರ್ಷ, ಒಂದು ವರ್ಷ ಪೂರೈಸಿರುವವರು ಹಾಗೂ ಈವರೆಗೆ ಒಮ್ಮೆಯೂ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಕ್ಷಣವೇ ಈ ಪ್ರಕ್ರಿಯೆ ಮುಗಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BPL-Card-APL-Card-Ration-Card

ಇ-ಕೆವೈಸಿ ಬಾಕಿ ವಿವರ

  • ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸಿ ಐದು ವರ್ಷ ಪೂರೈಸಿರುವ 7,90,815 ಫಲಾನುಭವಿಗಳ ಪೈಕಿ 6,71,681 ಜನರು ಪ್ರಕ್ರಿಯೆ ಪೂರ್ಣಗೊಳಿಸಿದ್ದು, 1,19,134 ಜನರ ಇ-ಕೆವೈಸಿ ಬಾಕಿಯಿದೆ.
  • ಒಂದು ವರ್ಷ ಪೂರೈಸಿರುವ 4,00,444 ಫಲಾನುಭವಿಗಳ ಪೈಕಿ 5,574 ಜನರು ಇ-ಕೆವೈಸಿ ಮಾಡಿಸಿದ್ದು, 3,94,870 ಜನರ ಪ್ರಕ್ರಿಯೆ ಬಾಕಿಯಿದೆ.
  • ಒಮ್ಮೆಯೂ ಇ-ಕೆವೈಸಿ ಮಾಡಿಸದ 19,065 ಫಲಾನುಭವಿಗಳಲ್ಲಿ 3,782 ಜನರು ಮಾತ್ರ ಪ್ರಕ್ರಿಯೆ ಮುಗಿಸಿದ್ದು, ಇನ್ನು 15,283 ಫಲಾನುಭವಿಗಳು ಬಾಕಿಯಿದ್ದಾರೆ.

ಇ-ಕೆವೈಸಿ ಮಾಡಿಸುವುದು ಹೇಗೆ?

ಉಳಿದಿರುವ ಎಲ್ಲಾ ಫಲಾನುಭವಿಗಳು ನವೆಂಬರ್ 30ರ ಒಳಗೆ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ಅನ್ನ ಸೇವೆ ಮೊಬೈಲ್ ಆ್ಯಪ್ ಮೂಲಕವೂ ಪ್ರಕ್ರಿಯೆ ಪೂರ್ಣಗೊಳಿಸಬಹುದು.

ಸಮಸ್ಯೆಗಳಿದ್ದಲ್ಲಿ ಆಯಾ ತಾಲೂಕಿನ ತಹಶೀಲ್ದಾರ್ ಕಚೇರಿ ಅಥವಾ ಶಿವಮೊಗ್ಗ ಹಾಗೂ ಭದ್ರಾವತಿ ನಗರದ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: