ಅಧ್ಯಾಪಕ, ಸಹಾಯಕ ಪ್ರಾಧ್ಯಾಪಕರ ನೇಮಕ, ಅಧಿಸೂಚನೆ ಯಾವಾಗ?  

ಶಿಕ್ಷಣ ಸುದ್ದಿ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಅ‍ಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಲ್ಲಿದೆ 5 ಪಾಯಿಂಟ್‌ ನ್ಯೂಸ್‌. (ಈ ಸುದ್ದಿಯನ್ನು ಇನ್ನು 48 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

point-1

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 1 ಸಾವಿರ ಅಧ್ಯಾಪಕ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 2 ಸಾವಿರ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ವಾರದೊಳಗೆ ಅಧಿಕೃತ ಅಧಿಸೂಚನೆ ಹೊರಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

EDUCATION-NEWS-GRAPHICS-BY-SHIVAMOGGA-LIVE

point-2

ನೂತನ ಪ್ರಾಂಶುಪಾಲರಿಗೆ ನೇಮಕಾತಿ ಆದೇಶ ವಿತರಿಸುವ ಶೈಕ್ಷಣಿಕ ಸಾರಥ್ಯ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಈ ನಿರ್ಧಾರ ಪ್ರಕಟಿಸಿದ್ದಾರೆ.

point-3

440 ಕಾಲೇಜುಗಳ ಪೈಕಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆ ಮೂಲಕ 310 ಪ್ರಾಂಶುಪಾಲರ ಆಯ್ಕೆ ಪಟ್ಟಿ ಸಿದ್ಧಗೊಂಡಿದೆ. ಬಾಕಿ ಉಳಿದಿರುವ 130 ಹುದ್ದೆಗಳ ನೇಮಕಾತಿಯೂ ಶೀಘ್ರವೇ ಕೈಗೂಡಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

point-4

ಸಾರ್ವಜನಿಕ ವಿಶ್ವವಿದ್ಯಾಲಯಗಳ ನೈಜ ಹಣಕಾಸಿನ ಸ್ಥಿತಿ ಪರಾಮರ್ಶಿಸಲು ಕಳೆದ ಮೂರು ವರ್ಷಗಳ ಆಯವ್ಯಯ ಹಾಗೂ ಲೆಕ್ಕಪತ್ರಗಳ ಸಮಗ್ರ ವಿವರಗಳನ್ನು ಸಲ್ಲಿಸುವಂತೆ ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.

point-5

ವಿಶ್ವವಿದ್ಯಾಲಯಗಳು ಸಲ್ಲಿಸುವ ಆಯವ್ಯಯ ಪರಿಶೀಲನೆ ನಡೆಯಲಿದೆ. ಪ್ರಸ್ತುತ ಲಭ್ಯವಿರುವ ಮಾಹಿತಿಯ ಪ್ರಕಾರ ರಾಜ್ಯದ ಯಾವುದೇ ವಿಶ್ವವಿದ್ಯಾಲಯವೂ ಹಣಕಾಸಿನ ಅಭಾವ ಎದುರಿಸುತ್ತಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: