ಶಿವಮೊಗ್ಗ ಲೈವ್
ತೀರ್ಥಹಳ್ಳಿ: ರಸ್ತೆಗೆ ದಿಢೀರ್ ಅಡ್ಡಬಂದ ನಾಯಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕಾರೊಂದು ಪಲ್ಟಿಯಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಸ್ ನಿಲ್ದಾಣದ ಬಳಿ ಕಳೆದ ರಾತ್ರಿ ಘಟನೆ ನಡೆದಿದೆ. (ಈ ಸುದ್ದಿಯನ್ನು ಇನ್ನು 28 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಕಾರಿನಲ್ಲಿದ್ದ ದಂಪತಿ ಹಾಗೂ ಮಕ್ಕಳು ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೀರ್ಥಹಳ್ಳಿ ಮೂಲದ ದಂಪತಿ ತಮ್ಮ ಮಕ್ಕಳೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಊರಿಗೆ ಹಿಂತಿರುಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಹಲವು ಬಾರಿ ಪಲ್ಟಿಯಾಗಿ ಜಖಂಗೊಂಡಿದೆ.

ಕಾರಿನಲ್ಲಿ ಸಿಲುಕಿಕೊಂಡಿದ್ದ ಎಲ್ಲರನ್ನೂ ಸ್ಥಳೀಯರು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: