ಶಿವಮೊಗ್ಗ ಲೈವ್
ಶಿವಮೊಗ್ಗ: ನಗರ ಉಪವಿಭಾಗ–1 ಹಾಗೂ ಘಟಕ–2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನವೆಂಬರ್ 21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. (ಈ ಸುದ್ದಿಯನ್ನು ಇನ್ನು 23 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಬಾಪೂಜಿನಗರ, ಟ್ಯಾಂಕ್ ಮೊಹಲ್ಲಾ, ಬನಶಂಕರಿ ದೇವಸ್ಥಾನ ರಸ್ತೆ, ಚರ್ಚ್ ಕಾಂಪೌಂಡ್, ಟ್ಯಾಂಕ್ ಬಂಡ್ ರಸ್ತೆ, ಮೀನಾಕ್ಷಿ ಭವನ, ಬಾಪೂಜಿನಗರ ಪ್ರಥಮ ದರ್ಜೆ ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ತಿಳಿಸಲಾಗಿದೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
