ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ಹೊರ ಬಂದ ಡಾಕ್ಟರ್‌ಗೆ ಕಾದಿತ್ತು ಆಘಾತ

ಶಿವಮೊಗ್ಗ: ನಗರದ ಮೆಗ್ಗಾನ್ ಬೋಧಕ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಮುಂಭಾಗದಲ್ಲಿ ನಿಲ್ಲಿಸಿದ್ದ ವೈದ್ಯೆಯೊಬ್ಬರ ಸ್ಕೂಟರ್ ಕಳ್ಳತನವಾಗಿದೆ. ಆಸ್ಪತ್ರೆಯಲ್ಲಿ ಎಂ.ಡಿ ವ್ಯಾಸಂಗ ಮಾಡುತ್ತಿರುವ ವೈದ್ಯೆ ಡಾ. ನಿಖಿತಾ ರೀನಾ ಸೇಕ್ವೇರಾ ಅವರ ಸುಜುಕಿ ಆಕ್ಸೆಸ್ 125 ಸ್ಕೂಟರ್ ಕಳುವಾಗಿದೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಡಾ. ನಿಖಿತಾ ಅವರು ನವೆಂಬರ್ 11 ರಂದು ಬೆಳಿಗ್ಗೆ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಮುಂಭಾಗ ತಮ್ಮ ಸ್ಕೂಟರ್ ನಿಲ್ಲಿಸಿ ಕರ್ತವ್ಯಕ್ಕೆ ತೆರಳಿದ್ದರು. ಸಂಜೆ ಕೆಲಸ ಮುಗಿಸಿ ಹಿಂತಿರುಗಿದಾಗ ಸ್ಕೂಟರ್ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

160125-mc-gann-hospital-general-image.webp