ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ನವೆಂಬರ್ 21 ರಂದು ಹೊಸನಗರ ತಾಲೂಕಿನ ವಿವಿಧೆಡೆ ಪ್ರವಾಸ ಕೈಗೊಂಡಿದ್ದಾರೆ. ಹಲವು ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಪ್ರವಾಸದ ವಿವರದಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 39 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಮಿನಿಸ್ಟರ್ ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ?
- ಬೆಳಿಗ್ಗೆ 10: ಹೊಸನಗರದ ಈಡಿಗರ ಸಮುದಾಯ ಭವನದಲ್ಲಿ ಆಯೋಜಿಸಿರುವ ತಾಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
- ಮಧ್ಯಾಹ್ನ 3: ತಾಳಗುಪ್ಪದ ಕಾನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಂಕೇರಿ ಗ್ರಾಮದ ಹತ್ತಿರ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿ ವೀಕ್ಷಿಸಲಿದ್ದಾರೆ.
- ಸಂಜೆ 3:30: ಸಾಗರ ತಾಲೂಕು ತಾಳಗುಪ್ಪ ಹೋಬಳಿಯ ತಲವಾಟ ಗ್ರಾ.ಪಂ. ವ್ಯಾಪ್ತಿಯ ಮಂಜಿನಕಾನು ಗ್ರಾಮದಿಂದ ಹಿರೇಮನೆ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ.
- ಸಂಜೆ 4: ತಲವಾಟ ಗ್ರಾ.ಪಂ. ವ್ಯಾಪ್ತಿಯ ಹಿರೇಮನೆ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಹೆಚ್ಚುವರಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
