ಶಿವಮೊಗ್ಗ, ದಾವಣಗೆರೆಯ 95 ಮಂದಿ ಆಫ್ರಿಕಾದ ಕಾಂಗೋ ದೇಶದಲ್ಲಿ ಅರೆಸ್ಟ್‌, ಕಾರಣವೇನು?

ಶಿವಮೊಗ್ಗ: ಗಿಡಮೂಲಿಕೆ ವ್ಯಾಪಾರಕ್ಕಾಗಿ ಆಫ್ರಿಕಾದ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ದೇಶಕ್ಕೆ ತೆರಳಿದ್ದ ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ 95 ಹಕ್ಕಿಪಿಕ್ಕಿ ಸಮುದಾಯದವರನ್ನು ಅಲ್ಲಿನ ಅಧಿಕಾರಿಗಳು ಬಂಧಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 52 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಬಂಧಿತರನ್ನು ಸುರಕ್ಷಿತವಾಗಿ ತಾಯಿನಾಡಿಗೆ ಕರೆತರಲು ಕೇಂದ್ರ ಸರ್ಕಾರ ತಕ್ಷಣ ರಾಜತಾಂತ್ರಿಕ ಮಟ್ಟದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘಟನೆಯ ರಾಜ್ಯಾಧ್ಯಕ್ಷ ಪುನೀತ್ ಕುಮಾರ್ ಆಗ್ರಹಿಸಿದ್ದಾರೆ.

95-Members-of-Hakki-Pikki-Camp-arrested-at-Congo-in-South-Africa

ಏಜೆಂಟರಿಂದ ವಂಚನೆ ಆರೋಪ

ಶಿವಮೊಗ್ಗ ಜಿಲ್ಲೆಯ ಹಕ್ಕಿಪಿಕ್ಕಿ ಕ್ಯಾಂಪ್‌ನ 70 ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಅಸ್ತಾಪನಹಳ್ಳಿಯ 25 ಜನರು ಮೂರು ತಿಂಗಳ ಹಿಂದೆ ಕಾಂಗೋಗೆ ತೆರಳಿದ್ದರು. ಸ್ಥಳೀಯ ಏಜೆಂಟರು ಪ್ರತಿಯೊಬ್ಬರಿಂದ ₹5 ಲಕ್ಷ ಹಣ ಪಡೆದು, ಟೂರಿಸ್ಟ್ ವೀಸಾದಲ್ಲಿ ಕರೆದೊಯ್ದು ನಕಲಿ ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರವಾಸಿ ವೀಸಾದಲ್ಲಿ ವ್ಯಾಪಾರ ಮಾಡುತ್ತಿದ್ದರೆಂಬ ಆರೋಪದ ಮೇಲೆ ವಲಸೆ ಅಧಿಕಾರಿಗಳು ಬೆನಿ ಹಾಗೂ ಕಿಸಂಗಾನಿ ನಗರಗಳಲ್ಲಿದ್ದ ಇವರನ್ನು ಬಂಧಿಸಿ, ರಾಜಧಾನಿ ಕಿನ್ಶಾಸಾಗೆ ಕರೆತಂದಿದ್ದಾರೆ ಎಂದು ತಿಳಿಸಲಾಗಿದೆ.

ಸರ್ಕಾರಕ್ಕೆ ಸಂಘದ ಮನವಿ

ಕೇಂದ್ರ ಸರ್ಕಾರವು ಸಂಕಷ್ಟದಲ್ಲಿರುವ 95 ಜನರ ಸುರಕ್ಷತೆ, ಆಹಾರ ಹಾಗೂ ವೈದ್ಯಕೀಯ ನೆರವು ಕುರಿತ ಮಾಹಿತಿಯನ್ನು ಖಚಿತಪಡಿಸಬೇಕು. ಗಡಿಪಾರು ಪ್ರಕ್ರಿಯೆಯನ್ನು ಸುಲಭಗೊಳಿಸಿ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕರೆತರಬೇಕು. ಜೊತೆಗೆ ವಂಚಿಸಿದ ಏಜೆಂಟರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಮನವಿ ಮಾಡಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: