ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಡಿ.ಎಸ್. ಅರುಣ್ ಅವರ ಜನ್ಮದಿನದ ಅಂಗವಾಗಿ ನಗರದ ರೋಟರಿ ಬ್ಲಡ್ ಬ್ಯಾಂಕ್ ಸಭಾಂಗಣದಲ್ಲಿ ರಕ್ತದಾನ ಶಿಬಿರದಲ್ಲಿ ಆಯೋಜಿಸಲಾಗಿತ್ತು. 107 ಯುನಿಟ್ ರಕ್ತ ಸಂಗ್ರಹವಾಯಿತು. ಅರುಣ್ ಅವರ ಸ್ನೇಹಿತರ ಬಳಗದ ವತಿಯಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಶಿಬಿರದ ಅಂಗವಾಗಿ ವಿವಿಧ ಸಮಾಜಮುಖಿ ಸೇವಾ ಕಾರ್ಯಗಳನ್ನು ನಡೆಸಲಾಯಿತು. ಮಹಿಳೆಯರಿಗೆ ಹೊಲಿಗೆ ಯಂತ್ರ, ಯುವಕರಿಗೆ ಕ್ರಿಕೆಟ್ ಕಿಟ್ ಹಾಗೂ ಶ್ರವಣದೋಷವುಳ್ಳ ಫಲಾನುಭವಿಗಳಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಲಾಯಿತು. ಜೊತೆಗೆ ಗುಡ್‌ಲಕ್ ಹಾರೈಕೆ ಕೇಂದ್ರಕ್ಕೂ ನೆರವು ನೀಡಲಾಯಿತು.

ಆರ್‌ಎಸ್‌ಎಸ್ ಪ್ರಮುಖ ಗಿರೀಶ್ ಕಾರಂತ್, ಉದ್ಯಮಿ ಶಶಿಧರ್ ಭೂಪಾಳಮ್, ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್, ಕೆಎಸ್‌ಸಿಎ ಮಾಜಿ ಸಂಚಾಲಕ ಡಿ.ಆರ್. ನಾಗರಾಜ್, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ. ವಿಜಯಕುಮಾರ್ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಕಾರ್ಯದರ್ಶಿ ಮುರುಳಿ ಎಂ. ಉಪಸ್ಥಿತರಿದ್ದರು.