ತುಂಗಾ ಸೇತುವೆ ತೆರವು ಕಾರ್ಯಾಚರಣೆ, ಸ್ಥಳಕ್ಕೆ ಎಸ್‌ಪಿ ಭೇಟಿ, ಪರ್ಯಾಯ ಮಾರ್ಗದ ಪರಿಶೀಲನೆ

ಶಿವಮೊಗ್ಗ: ಬಿ.ಹೆಚ್. ರಸ್ತೆಯಲ್ಲಿರುವ ಹಳೆಯ ತುಂಗಾ ಸೇತುವೆ ತೆರವು ಹಾಗೂ ನೂತನ ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆ, ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸುವ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್ ಅವರು ಸ್ಥಳ ಪರಿಶೀಲನೆ ನಡೆಸಿದರು. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ನಗರ ಸಂಚಾರ ಠಾಣೆ ಇನ್‌ಸ್ಪೆಕ್ಟರ್ ದೇವರಾಜ್ ಅವರೊಂದಿಗೆ ಪ್ರಮುಖ ರಸ್ತೆಗಳಿಗೆ ಭೇಟಿ ನೀಡಿದ ಎಸ್‌ಪಿ, ವಿವಿಧ ವೃತ್ತಗಳಲ್ಲಿ ನಿಂತು ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಮಾರ್ಗ ಬದಲಾವಣೆ ಕುರಿತು ಚರ್ಚಿಸಿದರು. ಸೇತುವೆ ತೆರವು ಪ್ರಕ್ರಿಯೆ ಆರಂಭಗೊಂಡರೆ ಬಿ.ಹೆಚ್. ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ. ಹೀಗಾಗಿ ನಗರಕ್ಕೆ ಆಗಮಿಸುವ ಹಾಗೂ ನಿರ್ಗಮಿಸುವ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ಸಂಚಾರ ಮಾರ್ಗ ಬದಲಾವಣೆ ಯೋಜನೆ ರೂಪಿಸಲಾಗುತ್ತಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Shivamogga-SP-B.-Nikhil-inspected-B.H.-Road