ಶಿವಮೊಗ್ಗ: ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್‌ಗಳನ್ನು ನಗದಾಗಿ ಪರಿವರ್ತಿಸಿಕೊಡುವುದಾಗಿ ನಂಬಿಸಿ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರ ಕ್ರೆಡಿಟ್ ಕಾರ್ಡ್‌ನಿಂದ ₹1,40,829 ಕಡಿತಗೊಳಿಸಿ ವಂಚಿಸಲಾಗಿದೆ. (ಈ ಸುದ್ದಿಯನ್ನು ಇನ್ನು 34 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಅಪರಿಚಿತ ವ್ಯಕ್ತಿಯೊಬ್ಬ ನವೆಂಬರ್ 20 ರಂದು ಸಾಫ್ಟ್‌ವೇರ್ ಇಂಜಿನಿಯರ್ ಅವರ ಮೊಬೈಲ್‌ಗೆ ಕರೆ ಮಾಡಿ ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್‌ಗಳನ್ನು ಖಾತೆಗೆ ನಗದಾಗಿ ವರ್ಗಾಯಿಸುವುದಾಗಿ ತಿಳಿಸಿದ್ದ. ಆದರೆ ಸಾಫ್ಟ್‌ವೇರ್ ಇಂಜಿನಿಯರ್ ಇದನ್ನು ಬೇಡ ಎಂದು ಕರೆ ಕಡಿತಗೊಳಿಸಿದ್ದರು.

ಬಳಿಕ ಬ್ಯಾಂಕ್‌ನಿಂದ ಬಂದ ಟ್ರಾನ್ಸಾಕ್ಷನ್ ಅಲರ್ಟ್ ಸಂದೇಶಕ್ಕೆ ಸಾಫ್ಟ್‌ವೇರ್ ಇಂಜಿನಿಯರ್ ತಿಳಿಯದೇ ಒಪ್ಪಿಗೆ ನೀಡಿದ್ದರು. ತಕ್ಷಣವೇ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ಮೊದಲ ಬಾರಿಗೆ ₹35,391, ಎರಡನೇ ಬಾರಿಗೆ ₹35,391 ಹಾಗೂ ಮೂರನೇ ಬಾರಿಗೆ ₹70,046 ಸೇರಿದಂತೆ ಒಟ್ಟು ₹1,40,829 ಹಣ ಕಡಿತವಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.