ಹೈವೋಲ್ಟೇಜ್‌ ವಿದ್ಯುತ್‌ ಟವರ್‌ನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಯುವಕನ ಮೃತದೇಹ, ಏನಿದು ಕೇಸ್‌?

ಭದ್ರಾವತಿ: ಹೈವೋಲ್ಟೇಜ್ ವಿದ್ಯುತ್ ಟವರ್‌ನಲ್ಲಿ ಸುಮಾರು 25 ರಿಂದ 30 ವರ್ಷ ವಯಸ್ಸಿನ ಅಪರಿಚಿತ ಯುವಕನ ಮೃತದೇಹ ಜೋತುಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಭದ್ರಾವತಿ ನಗರದ ಜೆಪಿಎಸ್ ಕಾಲೋನಿ ಮೆಸ್ಕಾಂ ವಿದ್ಯುತ್ ವಿತರಣಾ ಕೇಂದ್ರದ ಸಮೀಪ ಘಟನೆ ನಡೆದಿದೆ. (ಈ ಸುದ್ದಿಯನ್ನು ಇನ್ನು 40 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಕಾರ್ಮಿಕರ ಭವನಕ್ಕೆ ತೆರಳುವ ಬೈಪಾಸ್ ರಸ್ತೆ ಸಂಪರ್ಕದ ಬಳಿ ಘಟನೆ ಸಂಭವಿಸಿದೆ. ಟವರ್ ಮೇಲ್ಭಾಗದ ತಂತಿಗಳ ನಡುವೆ ಶವ ಸಿಲುಕಿಕೊಂಡಿತ್ತು. ವಿದ್ಯುತ್ ಸ್ಪರ್ಶದಿಂದ ಮೃತದೇಹದ ಕೆಲ ಭಾಗ ಸುಟ್ಟು ಕರಕಲಾಗಿದೆ.

Youth-on-high-tension-pole-at-bhadravathi

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದರು. ಮೆಸ್ಕಾಂ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಕೆಳಗೆ ಇಳಿಸಿದರು. ಬಳಿಕ ಶವವನ್ನು ಶವಪರೀಕ್ಷೆಗಾಗಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಸ್ಥಳಕ್ಕೆ ಮೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು, ಪೇಪರ್ ಟೌನ್ ಠಾಣೆ ಪೊಲೀಸರು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತನ ಗುರುತು ಇನ್ನು ಪತ್ತೆಯಾಗಿಲ್ಲ. ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: