ಶಿವಮೊಗ್ಗ: ಭದ್ರಾ ಜಲಾಶಯದ ನಾಲೆಗಳಿಗೆ ಕನಿಷ್ಠ 20 ದಿನ ನೀರು ಹರಿಸುವಂತೆ ಆಗ್ರಹಿಸಿ, ಭದ್ರಾ ಅಚ್ಚುಕಟ್ಟುದಾರರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ, ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಯಿತು. ನಗರದ ವಿವಿಧೆಡೆ ರ್ಯಾಲಿ ನಡೆಸಿದ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಇನ್ನು, ತಮ್ಮ ಬೇಡಿಕೆ ಈಡೇರದ ಹಿನ್ನೆಲೆ ಅಹೋರಾತ್ರಿ ಧರಣೆ ಮುಂದುವರೆಸಿದ್ದಾರೆ. (ಈ ಸುದ್ದಿಯನ್ನು ಇನ್ನು 136 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಪುರಲೆಯಿಂದ ಟ್ರಾಕ್ಟರ್ ರ್ಯಾಲಿ
ನಗರದ ಪುರಲೆಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ರೈತರು ಟ್ರ್ಯಾಕ್ಟರ್ಗಳ ರ್ಯಾಲಿ ನಡೆಸಿದರು. ಒಣಗಿದ ಅಡಿಕೆ ಮರಗಳನ್ನು ಹೊತ್ತು ತಂದಿದ್ದ ರೈತರು, ನೀರಿಲ್ಲದೆ ಬೆಳ ಒಣಗುತ್ತಿರುವುದನ್ನು ಪ್ರದರ್ಶಿಸಿದರು. ಇನ್ನು, ಜಿಲ್ಲಾಧಿಕಾರಿ ಕಚೇರಿ ಬಳಿ ಆಗಮಿಸಿದ ರೈತರು, ಮುಖ್ಯ ಗೇಟ್ ತಳ್ಳಿ ಒಳನುಗ್ಗಲು ಯತ್ನಿಸಿದರು. ಟ್ರ್ಯಾಕ್ಟರ್ಗಳನ್ನು ಜಿಲ್ಲಾಧಿಕಾರಿ ಕಚೇರಿ ಕಾಂಪೌಂಡ್ ಒಳಗೆ ನುಗ್ಗಿಸಿ ನಿಲ್ಲಿಸಿದ್ದಾರೆ.

ಎರಡು ರಸ್ತೆಗಳು ಬಂದ್
ಇನ್ನು, ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಸವಳಂಗ ರಸ್ತೆಯ ಎರಡು ಬದಿಯಲ್ಲಿ ರೈತರು ಟ್ರ್ಯಾಕ್ಟರ್ಗಳನ್ನು ನಿಲ್ಲಿಸಿದ್ದಾರೆ. ಹಾಗಾಗಿ ಮಹಾವೀರ ವೃತ್ತದಿಂದ ಶಿವಮೂರ್ತಿ ಸರ್ಕಲ್ ತನಕದ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ರಸ್ತೆ ಮೇಲೆ ಕುರಿತು ಧರಣಿ ನಡೆಸಿದರು.
ರೈತರ ಹೋರಾಟದಲ್ಲಿ ಏನೇನಾಯ್ತು? ಇಲ್ಲಿದೆ ಪಾಯಿಂಟ್ಸ್

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆಯಲ್ಲೇ ರೈತರು ಟ್ರ್ಯಾಕ್ಟರ್ಗಳನ್ನು ನಿಲ್ಲಿಸಿ, ಧರಣಿ ನಡೆಸಿದರು. ದೊಡ್ಡ ಸಂಖ್ಯೆಯ ರೈತರು ಸರ್ಕಾರ ವಿರುದ್ಧ ಘೋಷಣೆ ಕೂಗಿದರು.

ರೈತ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸರ್ಕಾರ ವಿರುದ್ಧ ಘೋಷಣೆ ಕೂಗಿ ಬೆಳೆ ರಕ್ಷಣೆಗೆ ಜಲಾಶಯದಿಂದ ನೀರು ಹರಿಸುವಂತೆ ಒತ್ತಾಯಿಸಿದರು.

ಪ್ರತಿಭಟನಾ ಸಭೆಯಲ್ಲಿ ರೈತ ಮುಖಂಡ ಕೆ.ಟಿ.ಗಂಗಾಧರ್ ಭಾಷಣ ಮಾಡಿದರು. ಬೆಳೆಗಳು ಒಣಗುತ್ತಿವೆ. ತಕ್ಷಣ ನಾಲೆಗಳಿಗೆ ನೀರು ಹರಿಸದೆ ಇದ್ದರೆ ಬೆಳೆ ಒಣಗಲಿದೆ. ಇದರಿಂದ ಅಚ್ಚುಕಟ್ಟು ಭಾಗದ ರೈತರು ಭವಿಷ್ಯಕ್ಕೆ ತೊಂದರೆ ಆಗಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದಂತೆ ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ. ನಿಟಳಿ, ಭದ್ರ ಜಲಾಶಯದ ಕಾರ್ಯನಿರ್ವಾಹಕ ಇಂಜಿನಿಯ್ ರವಿಕುಮಾರ್ ಸೇರಿ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ ಪ್ರಕಾಶ್ ನಿಟಳಿ ಮತ್ತು ಇಂಜಿನಿಯರ್ ರವಿಕುಮಾರ್ ಅವರು ಟ್ರ್ಯಾಕ್ಟರ್ ಏರಿ ಪ್ರತಿಭಟನಾಕಾರರ ಜೊತೆಗೆ ಚರ್ಚಿಸಿದರು.

ಸರ್ಕಾರದ ಆದೇಶದ ಮೇಲೆ ಕಳೆದ ವಾರ ಭದ್ರಾ ನಾಲೆಗಳಿಗೆ ನೀರು ಹರಿಸಲಾಯಿತು. ನಂತರ ಸರ್ಕಾರದ ಸೂಚನೆ ಮೇರೆಗೆ ನೀರು ನಿಲ್ಲಿಸಲಾಗಿದೆ. ಬೆಳಗಾವಿಯಲ್ಲಿ ಡಿ.4ರಂದು ನೀರಾವರಿ ಸಲಹ ಸಮಿತಿ ಸಭೆ ನಿಗದಿಯಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ. ನಿಟಳಿ ಮಾತನಾಡಿ, ರೈತರ ಬೇಡಿಕೆಗಳ ಕುರಿತು ಕೂಡಲೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ರೈತರ ನೋವನ್ನು ಕೂಡ ಮನವರಿಕೆ ಮಾಡುವುದಾಗಿ ಭರವಸೆ ನೀಡಿದರು.

ನಾಲೆಗಳಿಗೆ ನೀರು ಹರಿಸುವ ಕುರಿತು ಸಂಜೆ 4 ಗಂಟೆಯೊಳಗೆ ಆದೇಶ ಹೊರಡಿಸಬೇಕು ಎಂದು ರೈತರು ಆಗ್ರಹಿಸಿದ್ದರು. 4 ಗಂಟೆಯಾದರು ಅಧಿಕಾರಿಗಳು ಉತ್ತರಿಸದೆ ಇದ್ದಾಗ ರೈತರು ಜಿಲ್ಲಾಧಿಕಾರಿ ಕಚೇರಿಯೊಳಗೆ ನುಗ್ಗಲು ಯತ್ನಿಸಿದರು.

ಸಂಜೆ 5 ಗಂಟೆ ಬಳಿಕ ದಿಢೀರ್ ರಸ್ತೆಗಿಳಿದ ರೈತರು. ನಗರದ ವಿವಿಧೆಡೆ ರಸ್ತೆಗಳಲ್ಲಿ ಟ್ರಾಕ್ಟರ್ಗಳನ್ನು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ
ಡಿಸಿ ಕಚೇರಿ ಆವರಣಕ್ಕೆ ರೈತರು
ಇನ್ನು, ಅಧಿಕಾರಿಗಳ ಮಾತಿಗೆ ಒಪ್ಪದ ರೈತರು ಪ್ರತಿಭಟನೆ ಮುಂದುವರೆಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ಮತ್ತೊಂದೆಡೆ ರೈತರು ತಮ್ಮ ಟ್ರ್ಯಾಕ್ಟರ್ಗಳನ್ನು ರಸ್ತೆಯಲ್ಲೇ ನಿಲ್ಲಿಸಿದ್ದು, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.
‘ನಾಲೆಗೆ ನೀರು ಹರಿಸುವ ಸರ್ಕಾರದ ಅಧಿಕೃತ ಆದೇಶದ ಪ್ರತಿ ಬರುವವರೆಗೆ ಪ್ರತಿಭಟನಾ ಸ್ಥಳದಿಂದ ಮನೆಗೆ ಹೋಗುವುದಿಲ್ಲ. ನಮ್ಮನ್ನು ಬಂಧಿಸುವುದಾದರೆ ಬಂಧಿಸಿ ಜೈಲಿಗೆ ಅಟ್ಟಿ. ನಾಳೆಯಿಂದ ದನ-ಕರುಗಳೊಂದಿಗೆ ಬಂದು ಹೋರಾಟ ನಡೆಸುತ್ತೇವೆ’ ಎಂದು ರೈತರು ಎಚ್ಚರಿಸಿದರು.
ಸ್ಥಳಕ್ಕೆ ಬಿಜೆಪಿ ಎಂಎಲ್ಸಿ ಡಿ.ಎಸ್. ಅರುಣ್ ಭೇಟಿ ನೀಡಿ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.