ತೀರ್ಥಹಳ್ಳಿ ಮಹಿಷಿಯ ತುಂಗಾ ನದಿಯಲ್ಲಿ ಬೆಂಗಳೂರಿನ ಕಾನೂನು ವಿದ್ಯಾರ್ಥಿಗಳು ಸೇರಿ ನಾಲ್ವರು ನಾಪತ್ತೆ

ತೀರ್ಥಹಳ್ಳಿ: ತಾಲೂಕಿನ ಮಹಿಷಿಯಲ್ಲಿ ತುಂಗಾ ನದಿಯಲ್ಲಿ ನಾಲ್ವರು ನಾಪತ್ತೆಯಾಗಿದ್ದಾರೆ. ಬೆಂಗಳೂರಿನ ಕತ್ರಿಗುಪ್ಪೆ ನಿವಾಸಿಗಳಾದ ಕಾರ್ತಿಕ್ (31), ನಕುಲ್ (19), ಪವನ್ (30) ಹಾಗೂ ಚೇತನ್ (19) ನಾಪತ್ತೆಯಾದವರು. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಬೆಂಗಳೂರಿನಿಂದ ಮದುವೆ ಸಮಾರಂಭಕ್ಕೆ ಶಿವಮೊಗ್ಗ ನಗರಕ್ಕೆ ಬಂದಿದ್ದರು. ಬಳಿಕ ಮಹಿಷಿಗೆ ತೆರಳಿದ್ದರು ಎಂದು ತಿಳಿದು ಬಂದಿದೆ. ತುಂಗಾ ನದಿಯ ನೀರಿನ ಬಳಿ ಆಟವಾಡುತ್ತಿದ್ದ ವೇಳೆ ಒಬ್ಬರ ಹಿಂದೆ ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Search-Operation-for-Four-Bangalore-Residents-at-Mahishi-in-Thirtahahalli

ಬೆಂಗಳೂರಿನ ಇಟ್ಟಮಡುವಿನ ಪವನ್‌, ಕತ್ರಿಗುಪ್ಪೆಯ ಕಾರ್ತಿಕ್‌ ಮತ್ತು ತಲಘಟ್ಟಪುರದ ನಕುಲ್‌ ಅವರು ಕಾನೂನು ವ್ಯಾಸಂಗ ಮಾಡುತ್ತಿದ್ದರು. ಚೇತನ್‌ ಅವರು ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದರು ಎಂದು ತಿಳಿದು ಬಂದಿದೆ. ಮಾಳೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.  

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: