ತುಂಗಾ ನದಿಯಲ್ಲಿ ನಾಲ್ವರು ಯುವಕರ ಮೃತದೇಹಗಳು ಪತ್ತೆ

ತೀರ್ಥಹಳ್ಳಿ: ತಾಲ್ಲೂಕಿನ ಮಹಿಷಿ ಗ್ರಾಮದ ಬಳಿ ತುಂಗಾ ನದಿಯಲ್ಲಿ ಈಜಲು ತೆರಳಿ ನೀರುಪಾಲಾಗಿದ್ದ ನಾಲ್ವರು ಯುವಕರ ಮೃತದೇಹಗಳು ಪತ್ತೆಯಾಗಿವೆ. (ಈ ಸುದ್ದಿಯನ್ನು ಇನ್ನು 34 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿದ್ದ ಯುವಕರು, ಮಹಿಷಿ ಬಳಿ ತುಂಗಾ ನದಿ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ನದಿಯಲ್ಲಿ ಈಜಲು ಇಳಿದಾಗ ಓರ್ವ ಯುವಕ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದನು. ಆತನನ್ನು ರಕ್ಷಿಸಲು ಹೋಗಿ ನಾಲ್ವರೂ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದರು.

Search-Operation-at-Mahishi-Tunga-River-In-Thirthahalli

ಮೃತರನ್ನು ಕಾನೂನು ವಿದ್ಯಾರ್ಥಿಗಳಾದ ಕಾರ್ತಿಕ್, ನಕುಲ್, ಪವನ್ ಹಾಗೂ ಖಾಸಗಿ ಸಂಸ್ಥೆಯ ಉದ್ಯೋಗಿ ಚೇತನ್ ಎಂದು ಗುರುತಿಸಲಾಗಿದೆ. ಮಾಳೂರು ಠಾಣೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಈಶ್ವರ್ ಮಲ್ಪೆ ನೇತೃತ್ವದ ತಂಡ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ರವಾನಿಸಲಾಗಿದೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: