ಶಿವಮೊಗ್ಗ: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸಮಾಜವಾದಿ ಹೋರಾಟಗಾರ ಶಾಂತವೇರಿ ಗೋಪಾಲಗೌಡರ ಹೆಸರು ಇಡುವ ಕುರಿತು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧಾರ ಪ್ರಕಟಿಸಿದ್ದರು. ಅದನ್ನು ಈವರೆಗೆ ಅನುಷ್ಠಾನಗೊಳಿಸಿಲ್ಲ. ಇದನ್ನು ಖಂಡಿಸಿ ಮಾರ್ಚ್ 14ರಂದು ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಹೇಳಿದರು. (ಈ ಸುದ್ದಿಯನ್ನು ಇನ್ನು 46 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2026–27ನೇ ಸಾಲಿನ ರಾಜ್ಯ ಬಜೆಟ್‌ನ ಖಂಡಿಕೆ 166ರಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡರ ಹೆಸರಿಡುವ ಐತಿಹಾಸಿಕ ನಿರ್ಧಾರವನ್ನು ಸಿದ್ದರಾಮಯ್ಯ ಪ್ರಕಟಿಸಿದ್ದರು. ಆದರೆ ಈ ಘೋಷಣೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2027ರ ಮಾರ್ಚ್ 14ರಂದು ಗೋಪಾಲಗೌಡರ 104ನೇ ಜನ್ಮದಿನವಿದೆ. ಅಂದು ವಿಕ್ಟೋರಿಯಾ ಆಸ್ಪತ್ರೆಯ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಅಷ್ಟರೊಳಗೆ ಸರ್ಕಾರ ಮರುನಾಮಕರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಬೆಂಗಳೂರಿನ ಹಾಗೂ ರಾಜ್ಯದ ವಿವಿಧ ಭಾಗಗಳ ಗೋಪಾಲಗೌಡರ ಅಭಿಮಾನಿಗಳನ್ನು ಒಗ್ಗೂಡಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಧ್ಯಾ ರಾಗಿಗುಡ್ಡ, ಅಲೀಂ ಖಾನ್, ಎಸ್. ಪಿ. ಶಿವಣ್ಣ, ಶಂಕರ್ ನಾಯ್ಕ್,ಆದಿಶೇಷ, ರಾಜಮ್ಮ ಇದ್ದರು.