ಶಿವಮೊಗ್ಗದಲ್ಲಿ ರಾಜ್ಯೋತ್ಸೋವ, ಕ್ರೀಡೋತ್ಸವ, ಬರ್ತಿದ್ದಾರೆ ಕನ್ನಡದ ಪೂಜಾರಿ, ಯಾವಾಗ? ಎಲ್ಲಿ?

ಶಿವಮೊಗ್ಗ: ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಹಾಗೂ ಇಲಾಖೆಯ ಅಧಿಕಾರಿ ಮತ್ತು ನೌಕರರ ಸಂಘದ ವತಿಯಿಂದ ನ.27ರಿಂದ 29ರವರೆಗೆ ನಗರದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಕ್ರೀಡೋತ್ಸವ ಆಯೋಜಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. (ಈ ಸುದ್ದಿಯನ್ನು ಇನ್ನು 75 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಬಸವನಗುಡಿ ಮುಖ್ಯ ರಸ್ತೆಯ ಚೌಡಮ್ಮ ದೇವಸ್ಥಾನದ ಪಕ್ಕದಲ್ಲಿರುವ ಸರ್ಕಾರಿ ನೌಕರರ ವಿಕಾಸ ಕೇಂದ್ರದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ನ. 27ರಂದು ಸಂಜೆ 5.30ಕ್ಕೆ ಪ್ರಹ್ಲಾದ ದೀಕ್ಷಿತ್ ತಂಡದಿಂದ ಸಂಗೀತ ಕಾರ್ಯಕ್ರಮದೊಂದಿಗೆ ಸಂಭ್ರಮಕ್ಕೆ ಚಾಲನೆ ದೊರೆಯಲಿದೆ. ಸಂಜೆ 6.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಇಲಾಖೆಯ ಪ್ರಧಾನ ನಿರ್ದೇಶಕ ರಾಮಪ್ರಸಾದ್ ಎಸ್.ಎಂ. ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ. ನಿಟಳಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

130525-CS-Shadakshari-Press-meet-in-shimoga

ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಕನ್ನಡ ನುಡಿಹಬ್ಬದ ಸಂದೇಶ ನೀಡಲಿದ್ದಾರೆ. ಕರ್ನಾಟಕ ರಣಜಿ ತಂಡದ ಮಾಜಿ ಚಾಂಪಿಯನ್ ಆಟಗಾರ ಮಿಥುನ್ ಬಿರಾಲ ಕ್ರೀಡೋತ್ಸವದ ಸಂದೇಶ ನೀಡಲಿದ್ದಾರೆ. ಇಲಾಖೆಯ ನಿರ್ದೇಶಕ ಹಾಗೂ ಸಂಘದ ಅಧ್ಯಕ್ಷ ಶ್ರೀಕೃಷ್ಣ ಎನ್. ಬುಗಟ್ಯಾಗೋಳ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಸಂಜೆ 7.30ರಿಂದ ಪ್ರತಿಭಾ ಪುರಸ್ಕಾರ ಹಾಗೂ ಇಲಾಖೆಯ ನಿವೃತ್ತ ಅಧಿಕಾರಿ ಮತ್ತು ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8ರಿಂದ 10.30ರವರೆಗೆ ಕಂಬದರಂಗಯ್ಯ, ಪೃಥ್ವಿ ಭಟ್, ಅಂಕಿತ ಕುಂಡು, ಅಮೀಶ್ ಕುಮಾರ್ ಹಾಗೂ ಪ್ರಹ್ಲಾದ ದೀಕ್ಷಿತ್ ತಂಡದಿಂದ ಕನ್ನಡ ರಾಜ್ಯೋತ್ಸವ ಸಂಗೀತ ರಸಸಂಜೆ ಏರ್ಪಡಿಸಲಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ನ. 28ರಂದು ಬೆಳಿಗ್ಗೆ 8ರಿಂದ ಇಲಾಖೆಯ ಕ್ರೀಡಾಕೂಟಗಳು ನಡೆಯಲಿವೆ. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವವರು ನಿಗದಿತ ಸಮಯಕ್ಕೆ ಹಾಜರಾಗಬೇಕು. ನ. 29ರಂದು ಸಂಜೆ 4.30ಕ್ಕೆ ಕ್ರೀಡೋತ್ಸವದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ನಡೆಯಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಶಾಖೆಯ ಅಧ್ಯಕ್ಷP ಶ್ರೀಕಾಂತ್, ಲೋಕೇಶ್, ಕಾಂತರಾಜ್, ಮಂಜುನಾಥ ಇದ್ದರು.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: