ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019
ತೆಲಂಗಾಣದಲ್ಲಿ ಪಶು ವೈದ್ಯೆಯ ಅತ್ಯಾಚಾರಿಗಳನ್ನು ಪೊಲೀಸರು ಎನ್’ಕೌಂಟರ್ ಮಾಡಿದ್ದನ್ನು ಸೊರಬದಲ್ಲಿ ವಿವಿಧ ಸಂಘಟನೆಗಳು ವಿಭಿನ್ನವಾಗಿ ಸಂಭ್ರಮಿಸಿವೆ. ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಸಿಹಿ ಹಂಚಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈ ಸಂದರ್ಭ ಮಾತನಾಡಿದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಜನಪದ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ, ತೆಲಂಗಾಣದಲ್ಲಿ ಪಶು ವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವುದು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವ ಘಟನೆಯಾಗಿದೆ. ದೇಶದ ಮೂಲೆ ಮೂಲೆಗಳಿಂದಲೂ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂಬುದು ಆಗ್ರಹವಾಗಿತ್ತು. ಈ ನಡುವೆ ಘಟನೆ ನಡೆದ ಸ್ಥಳದಲ್ಲಿಯೇ ಅರೋಪಿಗಳನ್ನು ಎನ್ಕೌಂಟರ್ ಮಾಡಿರುವುದು ಅತ್ಯಾಚಾರಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದಂತಾಗಿದೆ ಎಂದರು.
ಇತರರಿಗು ಇದು ಪಾಠವಾಗಬೇಕು
ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದ ಗೌಡ ಮಾತನಾಡಿ, ಸಹೋದರಿ ಪಶು ವೈದ್ಯೆಯ ಪ್ರಕರಣದ ನಾಲ್ವರು ಆರೋಪಿಗಳಿಗೆ ಗುಂಡಿಕ್ಕಿ ಕೊಂದಿರುವುದು ಇತರರಿಗೆ ಪಾಠವಾಗಿದೆ. ಪೊಲೀಸ್ ಅಧಿಕಾರಿಗಳಿಗೂ ಸಾರ್ವಜನಿಕರು ಸಹಕಾರ ನೀಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಸಾಧ್ಯವಿದೆ ಎಂದರು.
ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಜನಪದ ಮಹಿಳಾ ಘಟಕದ ಗೌರವಾಧ್ಯಕ್ಷೆ ಸವಿತಾ ಎಂ. ಭಟ್, ಸಹ ಕಾರ್ಯದರ್ಶಿ ವಸುಂಧರಾ ಅಡಿಗ, ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಶ್ರೀಪಾದ ಬಿಚ್ಚುಗತ್ತಿ, ಪಿಎಸ್ಐ ಎ. ಕಿರಣ್ ಕುಮಾರ್, ಎಎಸ್ಐಗಳಾದ ಎಚ್. ಚಿನ್ನಪ್ಪ, ಬಿ. ತೊಳಚನಾಯ್ಕ್, ಪೇದೆಗಳಾದ ಶಿವಶಂಕರ ಬಾರ್ಕಿ, ಕೆ.ಸಿ. ಪ್ರಭಾಕರ, ದಿನೇಶ್, ಎಂ.ಬಿ. ಮೆಹಬೂಬ್, ಸೇರಿ ಇತರರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
On account of Hyderabad Encounter various organisations distributed sweets to Soraba Police.