JOBS UPDATE – ಕಾಲೇಜು, ಪ್ರೌಢಶಾಲೆಗಳ ವಿವಿಧ ಬೋಧಕ, ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾರ್ಕಳ: ಆಜೇಕಾರು ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್‌ನ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕಾರ್ಕಳ, ಮಣಿಪಾಲ, ಉಡುಪಿ ಹಾಗೂ ಆಜೇಕಾರು ಶಾಖೆಗಳಲ್ಲಿ ಖಾಲಿ ಇರುವ ವಿವಿಧ ಬೋಧಕ ಹಾಗೂ ಬೋಧಕೇತರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. (ಈ ಸುದ್ದಿಯನ್ನು ಇನ್ನು 46 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಯಾವೆಲ್ಲ ಹುದ್ದೆಗಳಿವೆ?

ಕಾಲೇಜು ವಿಭಾಗ: ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಸಂಖ್ಯಾಶಾಸ್ತ್ರ, ಸಂಸ್ಕೃತ, ಹಿಂದಿ ಹಾಗೂ ಇಂಗ್ಲಿಷ್ ಉಪನ್ಯಾಸಕ ಹುದ್ದೆಗಳು. ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಕಂಪ್ಯೂಟರ್ ಸೈನ್ಸ್ ಲ್ಯಾಬ್ ಅಸಿಸ್ಟೆಂಟ್.

JOB-NEWS-SHIVAMOGGA

ಪ್ರೌಢಶಾಲೆ ವಿಭಾಗ: ಭೌತಶಾಸ್ತ್ರ, ಗಣಿತ, ರಸಾಯನಶಾಸ್ತ್ರ, ಜೀವಶಾಸ್ತ್ರ, ಇಂಗ್ಲಿಷ್, ಸಮಾಜ ವಿಜ್ಞಾನ, ಸಂಸ್ಕೃತ, ಹಿಂದಿ ವಿಷಯಗಳ ತರಬೇತಿ ಪಡೆದ ಪದವೀಧರ ಶಿಕ್ಷಕರು.

ಇತರ ಹುದ್ದೆಗಳು: ಹಾಸ್ಟೆಲ್ ವಾರ್ಡನ್/ಕೇರ್ ಟೇಕರ್, ಕಾಲೇಜು ಬಸ್ ಚಾಲಕರು, ಹಾಸ್ಟೆಲ್ ಸ್ಟಾಫ್ ನರ್ಸ್, ಹೌಸ್ ಕೀಪಿಂಗ್ ಸಿಬ್ಬಂದಿ, ಸೆಕ್ಯೂರಿಟಿ ಹಾಗೂ ಗಾರ್ಡನರ್.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಅನುಭವ ಇರುವ ಹಾಗೂ ಅನುಭವವಿಲ್ಲದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಸಕ್ತ ಅಭ್ಯರ್ಥಿಗಳು 10 ಡಿಸೆಂಬರ್ 2026ರ ಒಳಗೆ ತಮ್ಮ ರೆಸ್ಯೂಮ್‌ ಅನ್ನು ಸಂಸ್ಥೆಯ ಅಧಿಕೃತ ವೆಬ್‌ಸೈಟ್ www.jnanasudha.org ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8176810707, 8147454906 ಅನ್ನು ಸಂಪರ್ಕಿಸಬಹುದು.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: