ಶಿವಮೊಗ್ಗ ಲೈವ್
ಶಿವಮೊಗ್ಗ: ಚಲಿಸುತ್ತಿದ್ದ ಬೈಕ್‌ಗೆ ವಾಹನ ಡಿಕ್ಕಿಯಾಗಿ ಮೆಸ್ಕಾಂ ಲೈನ್‌ಮ್ಯಾನ್ ಒಬ್ಬರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಆಯನೂರಿನಲ್ಲಿ ಇಂದು ಬೆಳಿಗಿನ ಜಾವ ಘಟನೆ ನಡೆದಿದೆ. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹನುಮಂತನಹಳ್ಳಿ ಗ್ರಾಮದ ತಿರುಮಲೇಶ ರೆಡ್ಡಿ (31) ಮೃತರು. ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಇಂದು ಬೆಳಿಗ್ಗೆ ಮನೆಗೆ ಹಿಂತಿರುಗುತ್ತಿದ್ದರು. ಆಯನೂರಿನ ನಯಾರ ಪೆಟ್ರೋಲ್ ಬಂಕ್ ಬಳಿ ವಾಹನವೊಂದು ತಿರುಮಲೇಶ ರೆಡ್ಡಿ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.

ಗಂಭೀರ ಗಾಯಗೊಂಡಿದ್ದ ಲೈನ್‌ಮ್ಯಾನ್ ತಿರುಮಲೇಶ ರೆಡ್ಡಿ ಸಾವನ್ನಪ್ಪಿದ್ದಾರೆ. ತಿರುಮಲೇಶ್ ರೆಡ್ಡಿ ಅವರು ಹಾರನಹಳ್ಳಿ ಗ್ರಾಮದಲ್ಲಿ ಮೆಸ್ಕಾಂ ಲೈನ್‌ಮನ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕುಂಸಿ ಪೊಲೀಸ್ ಠಾಣೆ ವಾಪ್ತಿಯಲ್ಲಿ ಘಟನೆ ಸಂಭವಿಸಿದೆ.
JOB NEWS

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: