ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI | 12 ಡಿಸೆಂಬರ್ 2019
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ತೀರ್ಥಹಳ್ಳಿಯಲ್ಲೂ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ನಡೆಸಿ, ಕಿರುಕುಳ ತಪ್ಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೊಸನಗರ ಮತ್ತು ತೀರ್ಥಹಳ್ಳಿ ಋಣಮುಕ್ತ ಹೋರಾಟ ಘಟಕದ ವತಿಯಿಂದ ಇವತ್ತು ತೀರ್ಥಹಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರು, ತಹಶೀಲ್ದಾರ್’ಗೆ ಮನವಿ ಸಲ್ಲಿಸಿದರು.
ಮಹಿಳೆಯರೆ ಟಾರ್ಗೆಟ್
ಗ್ರಾಮೀಣ ಭಾಗದಲ್ಲಿ ಕೆಲವು ಮೈಕ್ರೋಫೈನಾನ್ಸ್’ಗಳು ಮಹಿಳೆಯರನ್ನು ಗುರಿಯಾಗಿಸಿಕೊಂಡು ಸಾಲ ನೀಡುತ್ತಿವೆ. ಶೇ.21 ರಿಂದ ಶೇ.31ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಮತ್ತೊಂದೆಡೆ ಸಾಲ ವಸೂಲಿಗೆ ಬರುವ ಸಿಬ್ಬಂದಿಗಳು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಪ್ರತಿಭಟನಾನಿರತ ಮಹಿಳೆಯರು ದೂರಿದ್ದಾರೆ.
ಸರ್ಕಾರ ಋಣಮುಕ್ತಗೊಳಿಸಿ
ಮೈಕ್ರೋ ಫೈನಾನ್ಸ್ ಸಂಸ್ಥೆಗಳಲ್ಲಿ ಮಹಿಳೆಯರು ಮಾಡಿರುವ ಸಾಲವನ್ನು ಸರ್ಕಾರ ಋಣಮುಕ್ತಗೊಳಿಸಬೇಕು ಎಂದು ಪ್ರತಿಭಟನಾನಿರತ ಮಹಿಳೆಯರು ಮನವಿ ಮಾಡಿದ್ದಾರೆ. ಈ ಕುರಿತು ಕೂಡಲೇ ಕ್ರಮ ಕೈಗೊಂಡು ಮಹಿಳೆಯರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸಬೇಕು. ತೊಂದರೆ ಮಾಡುತ್ತಿರುವ ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದ ಆಗ್ರಹಿಸಿದ್ದಾರೆ.
ಹೋರಾಟ ಸಮಿತಿ ಉಪಾಧ್ಯಕ್ಷ ರಾಮಪ್ಪ ಮೇಗರವಳ್ಳಿ, ಶಂಶಾದ್, ಮೋಹಿನಿ, ಕಿಗಡಿ ಕೃಷ್ಣಮೂರ್ತಿ, ಜಫ್ರುಲ್ಲ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Women in thirthahalli held a protest against Micro Finance Institutions and submitted the memorandum to Thahasildhar.