ಶಿವಮೊಗ್ಗ ಲೈವ್.ಕಾಂ | SHIMOGA | 12 ಡಿಸೆಂಬರ್ 2019
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಡಿ.21ರ ಬೆಳಿಗ್ಗೆ 10 ಗಂಟೆಗೆ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ರೈತ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್ ಅವರ ನೆನಪಿನ ಸಭೆ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಆರ್.ಬಸವರಾಜಪ್ಪ, ಎನ್.ಡಿ. ಸುಂದರೇಶ್ ಅವರು ರೈತ ಸಂಘದ ಸಂಸ್ಥಾಪಕರು. ರೈತರಿಗೆ, ಕೃಷಿಕರಿಗೆ, ಮಹಿಳೆಯರಿಗೆ ಸ್ವಾಭಿಮಾನ ತುಂಬಿದವರು. ಶೋಷಣೆ ವಿರುದ್ಧ ಹೋರಾ ಡಿದವರು. ಯುವಕರನ್ನು ಸಂಘಟಿಸಿದವರು. ರೈತರ ಬದುಕಿಗೆ ನ್ಯಾಯ ಸಿಗಬೇಕು ಎಂದು ಹೋರಾಡಿದವರು. ರೈತರ ಕಣ್ಮಣಿಯಾದ ಸುಂದರೇಶ್ ಅವರ ನೆನಪಿನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸುಂದರೇಶ್ ಅವರ ನೆನಪಿನ ಜೊತೆಗೆ ರೈತರಿಗೆ ನ್ಯಾಯ ಸಿಗಬೇಕೆಂದು ಹೋರಾಟ ಮಾಡಿ ಪೊಲೀಸರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ಸುಮಾರು 153 ರೈತರನ್ನು ನೆನಪು ಮಾಡಿಕೊಂಡು ಅವರು ಬಿಟ್ಟುಹೋದ ಹೋರಾಟವನ್ನು ಮುಂದುವರೆಸಬೇಕಾಗಿದೆ. ಸಂಘಟನೆಯನ್ನು ಬಲಪಡಿಸಬೇಕಾಗಿದೆ ಎಂದರು.
ಹಿಟ್ಟೂರು ರಾಜು, ಟಿ.ಎಂ.ಚಂದ್ರಪ್ಪ, ಕೆ.ರಾಘವೇಂದ್ರ, ಈಶಣ್ಣ, ಜಗದೀಶ್, ಶಿವಮೂರ್ತಿ, ಪಂಚಾಕ್ಷರಪ್ಪ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
Raitha Sanga and Hasiru Sene to hola meeting Shimoga DCC Bank Hall on account of N D Sundaresh’s Birthday, said HR Basavarajappa
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





