ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 16 ಡಿಸೆಂಬರ್ 2019
ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ಕಾನ್ಸ್’ಟೇಬಲ್ ಒಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಗೋಪಾಳ ಬಸ್ ಸ್ಟಾಂಡ್’ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತುಂಗಾನಗರ ಪೊಲೀಸ್ ಠಾಣೆ ಕಾನ್ಸ್’ಟೇಬಲ್ ನಾರಾಯಣ ಸ್ವಾಮಿ ಎಸಿಬಿ ಬಲೆಗೆ ಬಿದ್ದವರು. ಬೆಳಗ್ಗೆ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ನಾರಾಯಣಸ್ವಾಮಿ ಅವರನ್ನು ಬಂಧಿದ್ದಾರೆ.
ಲಂಚಕ್ಕೆ ಡಿಮಾಂಡ್ ಮಾಡಿದ್ದೇಕೆ?
ಹಳ್ಳದಿಂದ ಅಕ್ರಮವಾಗಿ ಮರಳು ಸಾಗಣೆ ಮಾಡಲು ಸಹಕರಿಸಲು ನಾರಾಯಣಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಎಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ. ಟಿಪ್ಪುನಗರ ನಿವಾಸಿ ಅಬ್ದುಲ್ ಸಲೀಂ ಎಂಬುವವರಿಗೆ ಹಣಕ್ಕೆ ಡಿಮಾಂಡ್ ಮಾಡಿದ್ದರು. ಇವತ್ತು ಗೋಪಾಳದಲ್ಲಿ 7 ಸಾವಿರ ರೂ. ಹಣ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ರೇಡ್ ಮಾಡಿದ್ದಾರೆ.
ಎಸಿಬಿ ಡಿವೈಎಸ್’ಪಿ ಮನೋಜ್ ಕುಮಾರ್, ಇನ್ಸ್’ಪೆಕ್ಟರ್ ವೀರೇಂದ್ರ, ಜೆ.ಎಸ್.ತಿಪ್ಪೇಸ್ವಾಮಿ, ಸಿಬ್ಬಂದಿಗಳಾದ ವಸಂತ, ನಾಗರಾಜ, ರಘುನಾಯ್ಕ, ಸುರೇಂದ್ರ, ಯೋಗೇಶಪ್ಪ, ಹರೀಶ್, ಶ್ರೀನಿವಾಸ್ ಕಾರ್ಯಾಚರಣೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ACB raid on Shimoga Tunganagara Police Constable. 7 Thousand rupees has been seized and the constable has been arrested.