ಯಾರೂ ಇಲ್ಲದಾಗ ಮನೆಗೆ ನುಗ್ಗಿದ, ವಿಕಲಚೇತನ ಯುವತಿಯ ರೇಪ್ ಮಾಡಿದ, ಅತ್ಯಾಚಾರಿಗೆ ಬಿತ್ತು ಧರ್ಮದೇಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI | 27 ಡಿಸೆಂಬರ್ 2019

ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಕಲಚೇತನ ಯುವತಿಯ ಕೈ ಕಾಲು ಕಟ್ಟಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಅತ್ಯಾಚಾರಕ್ಕೆ ಯತ್ನಿಸಿದವನನ್ನು ಹಿಡಿದು ಗ್ರಾಮಸ್ಥರೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

80273534 1012065292488224 4913265148640100352 n.jpg? nc cat=105& nc eui2=AeHlZgGw3xHvlHIUR6ZEzXRsxHL94SlKeMl17qwD9T8Y80x6xxtv9kOWDIdDvIYAIr33Q29HiMLAJpsAgSEjN4FisoiIAmMobDABHE36t9Pt1w& nc ohc=8l2LOZYu1m0AQlLspcu3K8DYSL0zvxuHV9lPwLepBQtWxDQpirLJiBgvQ& nc ht=scontent.fblr11 1

ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಯುವತಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ. ಅತ್ಯಾಚಾರ ಯತ್ನದ ವೇಳೆ ಯುವತಿ ಜೋರಾಗಿ ಕೂಗಿಕೊಂಡಿದ್ದರಿಂದ ಘಟನೆ ಬೆಳಕಿಗೆ ಬಂದಿದೆ.

ಅತ್ಯಾಚಾರಕ್ಕೆ ಯತ್ನಿಸಿದವನಿಗೆ ಧರ್ಮದೇಟು

ಅತ್ಯಾಚಾರಕ್ಕೆ ಯತ್ನಿಸಿದವನನ್ನು ಸತೀಶ್ (38) ಎಂದು ಗುರುತಿಸಲಾಗಿದೆ. ಈತ ತೀರ್ಥಹಳ್ಳಿ ತಾಲೂಕು ಶಿವರಾಜಪುರದ ನಿವಾಸಿ. ತನ್ನ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಸತೀಶ್‌ನನ್ನು ಹಿಡಿದ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ, ಧರ್ಮದೇಟು ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment