ತುಮಕೂರಿಗೆ
ಹೊರಟಿದ್ದ 15ಕ್ಕೂ ಹೆಚ್ಚು ರೈತರನ್ನು ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೆಳಗ್ಗೆ ರೈಲ್ವೆ ನಿಲ್ದಾಣದ ಪ್ರವೇಶ ದ್ವಾರದಲ್ಲೇ ರೈತರನ್ನು ತಡೆದ ಪೊಲೀಸರು, ಬಂಧಿಸಿದ್ದಾರೆ.
ಪೊಲೀಸರು
ರೈತರನ್ನು ತಡೆಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.
ರೈತರ ಬಂಧನಕ್ಕೆ ಕಾರಣವೇನು?
ಪ್ರಧಾನಿ
ನರೇಂದ್ರ ಮೋದಿ ಅವರು ಇವತ್ತು ತುಮಕೂರಿಗೆ ಭೇಟಿ ನೀಡುತ್ತಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಅವರು
ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಪ್ರತಿಭಟನೆ ನಡೆಸಲು ರೈತ ಸಂಘ ಮತ್ತು ಹಸಿರು ಸೇನೆ ನಿರ್ಧರಿಸಿದೆ.
ಕೇಂದ್ರ ಸರ್ಕಾರದ ರೈತ ವಿರೋಧ ನೀತಿ ವಿರೋಧಿಸಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು.
ರಾಜ್ಯದ
ವಿವಿಧೆಡೆಯ ರೈತರು ತುಮಕೂರಿಗೆ ತೆರಳುತ್ತಿದ್ದಾರೆ. ಶಿವಮೊಗ್ಗದಿಂದಲೂ ರೈತರು ತೆರಳಲು ಸಿದ್ಧವಾಗಿದ್ದರು.
ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅರೆಸ್ಟ್ ಮಾಡಲಾಗಿದೆ.
ರೈತ ಸಂಘದ
ಜಿಲ್ಲಾಧ್ಯಕ್ಷ ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಜಗದೀಶ್, ಕಾರ್ಯಾಧ್ಯಕ್ಷ ಪಿ.ಡಿ.ಮಂಜಪ್ಪ, ಕಾರ್ಯದರ್ಶಿ
ಗುರುಶಾಂತ, ತಾಲೂಕು ಅಧ್ಯಕ್ಷ ಚಂದ್ರಪ್ಪ, ಭದ್ರಾವತಿ ತಾಲೂಕು ಅಧ್ಯಕ್ಷ ಪಂಚಾಕ್ಷರಿ ಸೇರಿದಂತೆ ಹಲವರನ್ನು
ಬಂಧಿಸಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ
ಕರೆ ಮಾಡಿ 9964634494
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ