ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 7 ಜನವರಿ 2020
ಶಿವಮೊಗ್ಗದಲ್ಲಿ ಇವತ್ತು ಅವನೇ ಶ್ರೀಮನ್ನಾರಾಯಣನ ಹವಾ. ರಕ್ಷಿತ್ ಶೆಟ್ಟಿ ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿ ಬಳಗ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅವನೇ ಶ್ರೀಮನ್ನಾರಾಯಣ ಸಿನಿಮಾ ತಂಡ ಇವತ್ತು ಶಿವಮೊಗ್ಗದ ಭಾರತ್ ಸಿನಿಮಾಸ್’ಗೆ ಭೇಟಿ ನೀಡಿತ್ತು. ಸಿನಿಮಾ ನೋಡುತ್ತಿದ್ದ ಪ್ರೇಕ್ಷಕರನ್ನು ಭೇಟಿಯಾಗಿ ಸೆಲ್ಫಿ ಕ್ಲಿಕ್ಕಿಸಿಕೊಂಡರು.
ಇದೇ ವೇಳೆ ಶಿವಮೊಗ್ಗದಲ್ಲಿ ಅವನೇ ಶ್ರೀಮನ್ನಾರಾಯಣಗೆ ಭರ್ಜರಿ ರೆಸ್ಪಾನ್ಸ್ ನೋಡಿ, ನಟ ರಕ್ಷಿತ್ ಶೆಟ್ಟಿ, ನಟಿ ಶಾನ್ವಿ ಶ್ರೀವಾತ್ಸವ್, ಪ್ರಮೋದ್ ಶೆಟ್ಟಿ, ಬಾಲಾಜಿ ಮನೋಹರ್, ನಿರ್ದೇಶಕ ಸಚಿನ್ ರವಿ ಸಂಭ್ರಮಿಸಿದರು.
ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಇದೇ ವೇಳೆ ನಟ ರಕ್ಷಿತ್ ಶೆಟ್ಟಿ, ನಟಿ ಶಾನ್ವಿ ಶ್ರೀವಾತ್ಸವ್ ಸೇರಿದಂತೆ ಸಿನಿಮಾ ಟೀಮ್ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದರು. ಈ ವೇಳೆ ಕೆಲಕ್ಷಣ ನೂಕುನುಗ್ಗಲು ಉಂಟಾಯಿತು. ಅಭಿಮಾನಿಗಳು ನಟ ರಕ್ಷಿತ್ ಶೆಟ್ಟಿ ಪರವಾಗಿ ಘೊಷಣೆಗಳನ್ನು ಕೂಗಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]