ಹಿಂದಿನ ಡಿಸಿ ವಿರುದ್ಧ ಮಾನನಷ್ಟ ಕೇಸ್, ಒಂದು ರುಪಾಯಿ ಪರಿಹಾರ ಕೊಡುವಂತೆ ಕೋರ್ಟ್ ಸೂಚನೆ, ಕಾರಣವೇನು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 12 ಜನವರಿ 2020

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಒಂದು ರೂಪಾಯಿ ನೀಡಬೇಕು ಎಂದು ಹಿಂದಿನ ಜಿಲ್ಲಾಧಿಕಾರಿ, ಕೆಪಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್‌ಗೆ ಇಲ್ಲಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ಪೊನ್ನುರಾಜ್ 2011ರಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಆಗಿದ್ದ ವೇಳೆ ಕಂದಾಯ ಇಲಾಖೆ ನಿವೃತ್ತ ನೌಕರ ವಿನೋಬನಗರದ ಕೆ.ಶಿವಪ್ಪ ಮಾನನಷ್ಟ ಮೊಕದ್ದಮೆ ದಾಖಲಿಸಿ, ಒಂದು ರೂ. ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಸತೀಶ್, 60 ದಿನಗಳಲ್ಲಿ ಕೆ.ಶಿವಪ್ಪ ಅವರಿಗೆ 1 ರೂ. ಪರಿಹಾರ ನೀಡುವಂತೆ ಜ.10ರಂದು ಆದೇಶಿಸಿದ್ದಾರೆ.

ಏನಿದು ಕೇಸ್? ಮಾನನಷ್ಟಕ್ಕೇನು ಕಾರಣ?

ಶಿವಪ್ಪ ನಿವೃತ್ತರಾಗಿದ್ದರೂ ಕಂದಾಯ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಸಾರ್ವಜನಿಕರ ವ್ಯವಹಾರಗಳಿಗೆ ತೊಂದರೆ ಮಾಡುತ್ತಿದ್ದಾರೆಂದು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಎ.ಎಂ.ಮಹದೇವಪ್ಪ ಅಂದಿನ ಡಿಸಿ ಪೊನ್ನುರಾಜ್‌ಗೆ ದೂರು ನೀಡಿದ್ದರು. ವಿಚಾರಣೆ ನಡೆಸದೆ, ವಿವರಣೆ ಕೇಳಿ ನೋಟಿಸ್ ಕೂಡ ನೀಡದೆ ಶಿವಪ್ಪಗೆ ಯಾವುದೇ ಇಲಾಖೆ ಕಚೇರಿಗೆ ಹೋಗಬಾರದು ಎಂದು ಡಿಸಿ ಸುತ್ತೋಲೆ ಹೊರಡಿಸಿದ್ದರು.

ಪೊನ್ನುರಾಜ್ ಹೊರಡಿಸಿದ್ದ ಸುತ್ತೋಲೆ ತನ್ನ ವ್ಯವಹಾರಿಕ ಬದುಕಿನ ಮೇಲೆ ದುಷ್ಪರಿಣಾಮ ಬೀರಿದ್ದು, 25 ಲಕ್ಷ ರೂ.ಗೂ ಹೆಚ್ಚಿನ ನಷ್ಟ ಸಂಭವಿಸಿದೆ ಎಂದು ಶಿವಪ್ಪ, 1 ರೂ.ಗೆ ಸೀಮಿತಗೊಳಿಸಿ 2014ರಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Shimoga JMFC court has ordered to pay One Rupee as relief fund over a Defamation Case. The Case was against Former Deputy Commissioner Ponnuraj.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 12, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment