ಶಿವಮೊಗ್ಗ ಲೈವ್.ಕಾಂ | SHIMOGA | 12 ಜನವರಿ 2020
ಸಾಮಾಜಿಕ ಜಾಲತಾಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ನಿಗದಿ ಆಗಿರುವ ಕುರಿತು, ನಕಲಿ ಗೆಜೆಟ್ ಪ್ರತಿಯನ್ನು ಫಾರ್ವರ್ಡ್ ಮಾಡಲಾಗುತ್ತಿದೆ. ಇನ್ಮುಂದೆ ಈ ನಕಲಿ ಗೆಜೆಟ್ ಪ್ರತಿಯನ್ನು ವಾಟ್ಸಪ್, ಫೇಸ್’ಬುಕ್, ಟ್ವೀಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಅಪ್’ಲೋಡ್ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಡ್ಮಿನ್’ಗಳೇ ಹೊಣೆಗಾರರು..!
ಏಪ್ರಿಲ್ 5 ಮತ್ತು ಏಪ್ರಿಲ್ 9ರಂದು ಗ್ರಾಮ ಪಂಚಾಯಿತಿ ಚುನಾವಣೆ ನಿಗದಿಯಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಪ್ರೌಢ ಶಿಕ್ಷಣ ಉತ್ತೀರ್ಣರಾಗಿರಬೇಕು. ಆಧಾರ್ ಕಾರ್ಡ್, ಪಾನ್ ಕಾರ್ಡ್ ಹೊಂದಿರಬೇಕು ಸೇರಿದಂತೆ ಹಲವು ನಿಬಂಧನೆಗಳನ್ನು ಹೊಂದಿರುವ ಗೆಜೆಟ್ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆದರೆ ಚುನಾವಣಾ ಆಯೋಗ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದೆ.
ನಕಲಿ ಗೆಜೆಟ್ ಪ್ರತಿಯನ್ನು ವಾಟ್ಸಪ್’ಗಳಲ್ಲಿ ಫಾರ್ವರ್ಡ್ ಮಾಡಿದರೆ, ಮೆಸೇಜ್ ಕಳುಹಿಸಿದವರು ಮತ್ತು ಗ್ರೂಪ್ ಅಡ್ಮಿನ್’ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]