ಮೆಗ್ಗಾನ್ ಅಸ್ಪತ್ರೆಲಿ ಡ್ಯೂಟಿ ಡಾಕ್ಟರ್ ಇರಲ್ಲ, ಬಿಪಿ ಮಾತ್ರೆ ಸಿಗ್ತಿಲ್ಲ, ಸಮಸ್ಯೆ ಪರಿಹಾರಕ್ಕೆ ಗಡುವು ಫಿಕ್ಸ್ ಮಾಡಿದ ಮಿನಿಸ್ಟರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 22 ಜನವರಿ 2020

2019 readers copy new

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದ ನಿಯೋಗ ಇವತ್ತು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿತ್ತು. ಈ ವೇಳೆ ಹಲವು ನ್ಯೂನತೆಗಳು ಕಂಡು ಬಂದಿದ್ದು, ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಔಷಧ ಕೊರತೆ, ಸಿಬ್ಬಂದಿಗಳಿಗೆ ಸಂಬಳ ವ್ಯತ್ಯಯ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬಂದವು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

2009ರಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾಗಿದ್ದರು, ಕಾಮಗಾರಿ ಪೂರ್ಣಗೊಂಡಿಲ್ಲ. ಈ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದ ಸಚಿವ ಈಶ್ವರಪ್ಪ, ಸಿಮ್ಸ್ ನಿರ್ದೇಶಕ ಡಾ.ಲೇಪಾಕ್ಷಿ ಸೇರಿದಂತೆ ಹಲವರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೆ ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಬಿಪಿ ಮಾತ್ರೆ ನೋ ಸ್ಟಾಕ್

Mc Gann Hospital 2 2

ಸಭೆಯಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ ಮತ್ತು ಅಶೋಕ್ ನಾಯ್ಕ್ ಅವರು, ಮೆಗ್ಗಾನ್ ಆಸ್ಪತ್ರೆಯಲ್ಲಿ ಮೆಡಿಸಿನ್ ಸ್ಟಾಕ್ ಕುರಿತು ಮಾಹಿತಿ ಕೇಳಿದರು. ಷುಗರ್ ಮತ್ತು ಬಿಪಿಗೆ ಮಾತ್ರೆಗಳು ಎಷ್ಟಿವೆ ಎಂದು ಪ್ರಶ್ನಿಸಿದರು. ಈ ವೇಳೆ, ಸಿಬ್ಬಂದಿಗಳು ಷುಗರ್ ಮಾತ್ರೆಯಿದೆ. ಬಿಪಿಗೆ ಮಾತ್ರೆಗಳಿಲ್ಲ ಎಂದಾಗ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. 2019ರ ಸೆಪ್ಟೆಂಬರ್’ನಲ್ಲೇ ಅನುದಾನ ಬಂದಿದ್ದರೂ, ಮಾತ್ರೆಗಳನ್ನು ತರಿಸಿಲ್ಲ ಎಂದು ಕ್ಲಾಸ್ ತೆಗೆದುಕೊಂಡರು.

83944441 1035365440158209 60463458671394816 o.png? nc cat=102& nc ohc=mZl7f3LAdZwAX8aEOo9& nc ht=scontent.fmaa1 4

ಹೊರಗಿನ ಮೆಡಿಕಲ್ ಶಾಪ್’ಗೆ ರೆಫರ್ ಮಾಡುವಂತಿಲ್ಲ

ಮತ್ತೊಂದೆಡೆ, ಮಾತ್ರೆ, ಔಷಧಿಗಾಗಿ ಹೊರಗಿನ ಮೆಡಿಕಲ್ ಶಾಪ್’ಗಳಿಗೆ ರೆಫರ್ ಮಾಡಲಾಗುತ್ತಿದೆ ಎಂಬ ಆರೋಪದ ಕುರಿತು ಪ್ರಸ್ತಾಪಿಸಲಾಯಿತು. ಈ ವೇಳೆ ಸಭೆಗೆ ಬಂದಿದ್ದ ಮಾಧ್ಯಮ ಪ್ರತಿನಿಧಿಯೊಬ್ಬರಿಗೆ ಹೊರಗಿನ ಮೆಡಿಕಲ್ ಶಾಪ್’ಗೆ ರೆಫರ್ ಮಾಡಿರುವುದಾಗಿ ತಿಳಿಸಿದರು. ಇದರಿಂದ ಗರಂ ಆದ ಸಚಿವ ಈಶ್ವರಪ್ಪ, ಹೊರಗಿನಿಂದ ಔಷಧಿ ತರಿಸುವುದಕ್ಕೆ ಕಡಿವಾಣ ಹಾಕಬೇಕು. ಚೀಟಿ ಬರೆದುಕೊಡುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

82774991 1035366716824748 2597609178537132032 o.jpg? nc cat=101& nc ohc=0r7YC3MywlQAX 0q6F6& nc ht=scontent.fixe1 1

ಏನೇನೆಲ್ಲ ಚರ್ಚೆ ಆಯಿತು?

ಎಕ್ಸ್‍ರೇ ತೆಗೆದರೂ ಅದರ ಶೀಟ್ ನೀಡುತ್ತಿಲ್ಲ. ಬಹುತೇಕ ಹೊರರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. 10ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಸ್ಕ್ಯಾನಿಂಗ್ ಘಟಕ ಆರಂಭಿಸಿದರೂ ಕಾರ್ಯಾಚರಿಸುತ್ತಿಲ್ಲ. ಕರ್ತವ್ಯದ ಅವಧಿಯಲ್ಲಿ ವೈದ್ಯರು, ಸಿಬ್ಬಂದಿ ಲಭ್ಯವಿರುವುದಿಲ್ಲ. ಎಕ್ಸ್‍ರೇ ಟೆಕ್ನಿಷಿಯನ್ ಹುದ್ದೆಯನ್ನು ಭರ್ತಿ ಮಾಡಿಲ್ಲ. ಎಲ್ಲಾ 7 ರೇಡಿಯಾಲಜಿಸ್ಟ್ ಹುದ್ದೆ ಖಾಲಿಯಿದೆ. ಯಾವುದೇ ವಾರ್ಡ್‍ನಲ್ಲಿ ವೈದ್ಯರು ಇರುವುದಿಲ್ಲ ಎಂದು ಶಾಸಕರಾದ ಅರಗ ಜ್ಞಾನೇಂದ್ರ, ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯ ಪ್ರಸನ್ನ, ಉಪ ಮೇಯರ್ ಚನ್ನಬಸಪ್ಪ ಅವರು ಸಚಿವರ ಗಮನಕ್ಕೆ ತಂದರು.

82921993 1035367046824715 7789596397354876928 o.jpg? nc cat=102& nc ohc=VkTYQbmtqngAX ibOgr& nc ht=scontent.fixe1 1

ಎರಡೇ ತಿಂಗಳು ಗಡುವು

ಮೆಗ್ಗಾನ್ ಆಸ್ಪತ್ರೆಯ ಎಲ್ಲಾ ಲೋಪಗಳನ್ನು ಎರಡು ತಿಂಗಳ ಒಳಗಾಗಿ ಸರಿಪಡಿಸಬೇಕು. ಯಾವುದೇ ಕಾರಣಕ್ಕೂ ಇನ್ನು ಮುಂದೆ ಔಷಧಿಗಾಗಿ ಚೀಟಿ ಬರೆದುಕೊಡುವ ಬಗ್ಗೆ ದೂರುಗಳು ಬರಬಾರದು. ದೂರುಗಳು ಬಂದರೆ ಅಂತಹ ವೈದ್ಯರ ಮೇಲೆ ಕ್ರಮ ಕೈಗೊಳ್ಳಿ. ರೇಡಿಯಾಲಜಿಸ್ಟ್ ಹುದ್ದೆ ಭರ್ತಿಯಾಗುವ ತನಕ ಹೊರಗುತ್ತಿಗೆ ಆಧಾರದಲ್ಲಿ ಸೇವೆಯನ್ನು ಪಡೆದುಕೊಳ್ಳಬೇಕು. ಎಕ್ಸ್‍ರೇ ಶೀಟನ್ನು ರೋಗಿಗಳಿಗೆ ನೀಡಬೇಕು. ಕರ್ತವ್ಯದಲ್ಲಿರುವ ವೈದ್ಯರ ಮತ್ತು ಸಿಬ್ಬಂದಿಗಳ ಚಾರ್ಟ್ ಎಲ್ಲಾ ಕಡೆ ಹಾಕಬೇಕು ಎಂದು ಸೂಚಿಸಿದರು.

82834815 1035366496824770 1371863174826950656 o.jpg? nc cat=107& nc ohc=R ea dM egoAX tH7Vg& nc ht=scontent.fixe1 1

ಹೃದಯ ರೋಗಗಳಿಗೆ ಸಂಬಂಧಿಸಿದಂತೆ ಅತ್ಯಾಧುನಿಕ ಕ್ಯಾಥ್ ಲ್ಯಾಬ್ ಕಾಮಗಾರಿ ಎರಡು ತಿಂಗಳ ಒಳಗಾಗಿ ಪೂರ್ತಿಯಾಗಬೇಕು. ಔಷಧಿಗಳನ್ನು ಸರಿಯಾಗಿ ಪೂರೈಸದೆ ಕರ್ತವ್ಯ ಲೋಪ ಮಾಡುತ್ತಿರುವ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಚಿವರು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಅನುರಾಧ, ಮೆಗ್ಗಾನ್ ನಿರ್ದೇಶಕ ಡಾ.ಲೇಪಾಕ್ಷಿ ಬಿ.ಜಿ, ಆಡಳಿತಾಧಿಕಾರಿ ಶಿವಕುಮಾರ್, ಹಿರಿಯ ವೈದ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 22, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment