ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 27 ಜನವರಿ 2020
ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ, ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. ಅಪರ ಜಿಲ್ಲಾಧಿಕಾರಿ ಅನುರಾಧ ಅವರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇವತ್ತು ನಾಮಪತ್ರ ಸಲ್ಲಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾಂಗ್ರೆಸ್ ಅಭ್ಯರ್ಥಿ ಯಮುನಾ ರಂಗೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ಪಾಲಿಕೆ ವಿರೋಧ ಪಕ್ಷದ ನಾಯಕ ರಮೇಶ್ ಹೆಗ್ಡೆ, ಕಾರ್ಪೊರೇಟರ್ ಹೆಚ್.ಸಿ.ಯೋಗೇಶ್, ಪ್ರಮುಖರಾದ ರಂಗನಾಥ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಮೇಯರ್ ಸ್ಥಾನ ಬಿಸಿಎಂ (ಬಿ) ಮಹಿಳೆಗೆ ಮೀಸಲಾಗಿದೆ. ಪಾಲಿಕೆಯಲ್ಲಿ ಬಿಜೆಪಿ ಬಹುಮತ ಇದೆ. ಆದರೆ ಮೇಯರ್ ಸ್ಥಾನದ ಸ್ಪರ್ಧಿಗಳ ಜಾತಿ ಪ್ರಮಾಣ ಪತ್ರದ ವಿಚಾರಕ್ಕೆ ಎದುರಾಗಿರುವ ಗೊಂದಲದ ಹಿನ್ನೆಲೆ, ಕಾಂಗ್ರೆಸ್ ಅಭ್ಯರ್ಥಿ ಯಮುನಾ ರಂಗೇಗೌಡ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿಗೆ ಇನ್ನೂ ಢವಢವ
ಬಿಜೆಪಿ ಪಕ್ಷದಿಂದ ಮೇಯರ್ ಆಕಾಂಕ್ಷಿ ಆಗಿದ್ದ ಸುವರ್ಣ ಶಂಕರ್ ಅವರ ಜಾತಿ ಪ್ರಮಾಣ ಪತ್ರವನ್ನು, ಉಪ ವಿಭಾಗಾಧಿಕಾರಿ ತಿರಸ್ಕರಿಸಿದ್ದಾರೆ. ಮತ್ತೊಬ್ಬ ಆಕಾಂಕ್ಷಿ ಅನಿತಾ ರವಿಶಂಕರ್ ಅವರ ಜಾತಿ ಪ್ರಮಾಣ ಪತ್ರ ಸಂಬಂಧ, ದೂರು ದಾಖಲಾಗಿದೆ. ಉಪ ವಿಭಾಗಾಧಿಕಾರಿ ಅವರು ವಿಚಾರಣೆ ನಡೆಸಿದ್ದು, ಜ.28ಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ. ಇದು ಬಿಜೆಪಿ ಪಾಳಯದಲ್ಲಿ ಢವಢವ ಹುಟ್ಟಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]