ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 27 ಜನವರಿ 2020
ಕೃಷಿ ಕ್ಷೇತ್ರಕ್ಕೆ ಬಂಡವಾಳ ಹರಿಸಲು ಕರ್ನಾಟಕ ಭೂಸುಧಾರಣಾ ಕಾಯ್ದೆಯ ಸೆಕ್ಷನ್ 5ನ್ನು ರಾಜ್ಯ ಸರ್ಕಾರ ತಿದ್ದುಪಡಿ ಮಾಡುವುದನ್ನು ರಾಜ್ಯ ರೈತ ಸಂಘ ಪ್ರಬಲವಾಗಿ ವಿರೋಧಿಸುತ್ತದೆ ಎಂದು ರೈತ ಮುಖಂಡ ಕೆ.ಟಿ. ಗಂಗಾಧರ್ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್, ಈ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ರೈತರ ಭೂಮಿಯನ್ನು ಗುತ್ತಿಗೆ ಪಡೆದು, ಅದೇ ಭೂಮಿಯನ್ನು ಆಧಾರವಾಗಿಟ್ಟುಕೊಂಡು, ಕೃಷಿ ಸಂಬಂಧಿತ ಸಾಲವನ್ನು ಪಡೆಯಲು ಕಂಪನಿಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ. ರಾಜ್ಯದಲ್ಲಿ ದೊಡ್ಡ ದೊಡ್ಡ ಭೂಮಾಲೀಕರನ್ನು ಸೃಷ್ಟಿ ಮಾಡುವುದು ಮತತು ಬಹುರಾಷ್ಟ್ರೀಯ ಕಂಪನಿಗೆ ಅವಕಾಶವಾಗುತ್ತದೆ ಎಂದು ಆರೋಪಿಸಿದರು.
ಗುತ್ತಿಗೆ ಒಡಂಬಡಿಕೆ ಸಮಸ್ಯೆಗಳಾದರೆ ಅದನ್ನು ಬಗೆಹರಿಸುವ ಜವಾಬ್ದಾರಿಯನ್ನು ತಹಶೀಲ್ದಾರ್’ಗಳಿಗೆ ನೀಡಲಾಗಿದೆ. ಇದರಿಂದ ವ್ಯಾಜ್ಯಗಳು ಹಲವಾರು ವರ್ಷ ತಗಾದೆಗೆ ಒಳಗಾಗಿ, ಭೂಮಿ ಪಾಳು ಬೀಳುತ್ತದೆ. ಉತ್ಪಾದನೆ ಕುಂಠಿತವಾಗಿ ಆಹಾರ ಉತ್ಪಾದನೆ ಕುಸಿತದಿಂದ, ರೈತರು ನ್ಯಾಯಾಲಯ ಖರ್ಚು ಭರಿಸಲಾಗದೆ ಸಾಮಾಜಿಕ ಅಸಮತೋಲನ ಮತ್ತು ಗ್ರಾಮೀಣ ಬದುಕು ಬಂಡವಾಳ ಶಾಹಿಗಳ ಕಪಿಮುಷ್ಠಿಗೆ ತೆರಳುತ್ತದೆ ಎಂದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಈ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದರು. ಆ ವೇಳೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ಹಾಗಾಗಿ ನಿರ್ಧಾರದಿಂದ ಸಿದ್ದರಾಮಯ್ಯ ಸರ್ಕಾರ ಹಿಂದಕ್ಕೆ ಸರಿದಿತ್ತು. ಈಗ ಯಡಿಯೂರಪ್ಪ ಸರ್ಕಾರ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಒಂದು ವೇಳೆ ರಾಜ್ಯ ಸರ್ಕಾರ ಕ ಭೂಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಿದ್ದೇ ಆದಲ್ಲಿ, ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾದೀತು ಎಂದು ಎಚ್ಚರಿಕೆ ನೀಡಿದರು.ಸುದ್ದಿಗೋಷ್ಠಿಯಲ್ಲಿ ಯಶವಂತರಾವ್ ಘೋರ್ಪಡೆ, ಕೆ.ಸಿ. ಗಂಗಾಧರ, ಡಿ.ವಿ. ವೀರೇಶ, ಹಿರಿಯಣ್ಣಯ್ಯ ಮೊದಲಾದವರು ಉಪಸ್ಥಿತರಿದ್ದರು.